ರಾಯಚೂರು
ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೇಬಾಳಕ್ಯಾಂಪ್ ಬಳಿ ಜರುಗಿದೆ.
ಗಂಗಾವತಿ ತಾಲೂಕಿನ ಮುಷ್ಟೂರು ಗ್ರಾಮದ ದುರುಗಪ್ಪ(೪೦), ಈರಣ್ಣ(೫೦) ಮೃತರು. ಆಯನೂರಿನಲ್ಲಿ ಮೊಹರಂ ಹಬ್ಬದಲ್ಲಿ ಪಾಲ್ಗೊಂಡು, ಮುಷ್ಟೂರು ಗ್ರಾಮಕ್ಕೆ ತೆರಳುವಾಗ ಗೊರೇಬಾಳಕ್ಯಾಂಪ್ ಬಳಿ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರ ಮೃತಪಟ್ಟಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.