ಬಾಳೆಹೊನ್ನೂರು: ಪಟ್ಟಣ ಸಮೀಪದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ನೇಮನಹಳ್ಳಿ ಗ್ರಾಮದ ವಿದ್ಯಾರ್ಥಿ ಬಿ.ಕೆ.ಉಲ್ಲಾಸ್ (17) ಶುಕ್ರವಾರ ಮೃತಪಟ್ಟಿದ್ದಾರೆ. ಆ.28ರಂದು ಉಲ್ಲಾಸ್ ಪಟ್ಟಣ ಸಮೀಪದಲ್ಲಿ ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಜೀಪ್‌ಗೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದರು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.
ಶುಕ್ರವಾರ ಸಂಜೆ ಚಿಕಿತ್ಸೆ ಲಕಾರಿಯಾಗದೆ ವಿದ್ಯಾರ್ಥಿ ಉಲ್ಲಾಸ್ ನಿಧನ ಹೊಂದಿದ್ದು ಮೃತ ಉಲ್ಲಾಸ್‌ಗೆ ತಂದೆ, ತಾಯಿ, ಸಹೋದರ ಇದ್ದಾರೆ. ಉಲ್ಲಾಸ್ ಪಟ್ಟಣದ ಬಿಜಿಎಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ನಿಧನದ ಹಿನ್ನೆಲೆಯಲ್ಲಿ ಶನಿವಾರ ಬಿಜಿಎಸ್ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತು. ಶನಿವಾರ ನೇಮನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿ ಅಂತ್ಯಕ್ರಿಯೆ ನಡೆಯಿತು. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.