ಭಾವನ 
ನ್ಯೂಸ್

ಅಪಘಾತದಲ್ಲಿ ಯುವತಿ ಸಾವು

ಕುಶಾಲನಗರ: ಕುಶಾಲನಗರದ ಬಿಎಂ ರಸ್ತೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಯುವತಿ ಸಾವಿಗೀಡಾಗಿದ್ದಾಳೆ.

ಮರೂರು ಗ್ರಾಮದ ಭಾವನಾ (21) ಮೃತಪಟ್ಟವಳು. ಈಕೆ ಸ್ನೇಹಿತೆ ನಿಸರ್ಗ ಜತೆ ಕುಶಾಲನಗರದಿಂದ ತೆಪ್ಪದಕಂಡಿ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಮಡಿಕೇರಿ ಕಡೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಭಾವನಾ ಸ್ಥಳದಲ್ಲೇ ಮೃತಪಟ್ಟರೆ, ನಿಸರ್ಗ (21) ತೀವ್ರ ಗಾಯಗೊಂಡರು. ಅವರನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಬೈಕ್ ಚಾಲನೆ ಮಾಡುತ್ತಿದ್ದ ವರುಣ್ ಕೂಡ ಗಾಯಗೊಂಡಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಶಾಲನಗರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.