ಕಲಬುರಗಿ: ಅಂಗನವಾಡಿ ಶಾಲೆ ಮಕ್ಕಳಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವುಗಳನ್ನು ಸಂರಕ್ಷಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೇಳಿದರು.
ಹೊಸ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟಿçÃಯ ಆರೋಗ್ಯ ಅಭಿಯಾನದ ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಸಿ ಮಾತನಾಡಿ, ಅಂಗನವಾಡಿ ಶಾಲೆಗಳ ಮಕ್ಕಳನ್ನು ಗುರುತಿಸಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಸೂಚಿಸಿದರು.
ಅಪೌಷ್ಟಿಕ ಮಕ್ಕಳನ್ನು ಪತ್ತೆ ಹಚ್ಚಿ, ಒಂದುಗೂಡಿಸಿ, ಚಿಕಿತ್ಸೆ ನೀಡಬೇಕು. ಶಾಲೆ, ಕಾಲೇಜುಗಳಿಗೆ ಆರೋಗ್ಯ ಇಲಾಖೆಯವರು ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ಆರ್‌ಸಿಎಚ್ ಅಧಿಕಾರಿ ಡಾ.ಸಿದ್ದರಾಮ ಪಾಟೀಲ್ ಮಾತನಾಡಿ, ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅರೆ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ನ್ಯೂನತೆ ಕಂಡು ಬಂದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ಆರೋಗ್ಯ ಕೇಂದ್ರಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದರು.
ಹೃದ್ರೋಗ, ಸೀಳು ತುಟ್ಟಿ, ನೀಳ ಅಂಗುಳ, ಡೊಂಕು ಬುರುಡೆ, ವಕ್ರ ಕಾಲು ಸೇರಿ ವಿವಿಧ ರೋಗಕ್ಕೆ ಶಸ್ತç ಚಿಕಿತ್ಸೆ ಮಾಡಿಸಲಾಗಿದೆ. ೨೦೨೩-೨೪ನೇ ಸಾಲಿಗೆ ಹೊಲಿಸಿದರೆ ೨೦೨೪-೨೫ ನೇ ಸಾಲಿನಲ್ಲಿ ಆರ್‌ಬಿಎಸ್‌ಕೆ ತಂಡಗಳು ಉತ್ತಮ ಕಾರ್ಯನಿರ್ವಹಿಸಿವೆ ಎಂದು ಸಿಇಒ ಭಂವರ್‌ಸಿAಗ್ ಮೀನಾ ಹರ್ಷ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೂರ್ಯಕಾಂತ ಮದಾನೆ, ಡಿಎಚ್‌ಓ ಡಾ.ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ಸರ್ಜನ್ ಡಾ.ರೊಕ್ಕಿಯ್ಯ ಅಸನಾ ರಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ, ಡಾ.ಮಾರುತಿ ಕಾಂಬಳೆ, ಭೀಮರಾಯ ಕಣ್ಣೂರ ಇತರರಿದ್ದರು.