ನ್ಯೂಸ್

ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ

ತಿ.ನರಸೀಪುರ: ರಾಜ್ಯದಲ್ಲಿ ಜಾ.ದಳ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ಹೇಳಿದರು.


ಹೊರಳಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ಕುರುಬ ಸಮುದಾಯದ ಮುಖಂಡರನ್ನು ಜೆಡಿಎಸ್‌ಗೆ ಬರಮಾಡಿಕೊಂಡು ಅವರು ಮಾತನಾಡಿದರು.
ಜೆಡಿಎಸ್ ಪಕ್ಷ ಬಡವರು, ದೀನ ದಲಿತರು, ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡಿದೆ. ಹಾಗಾಗಿ ಅನೇಕ ಮುಖಂಡರು ಕಾಂಗ್ರೆಸ್ ತೊರೆದು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದರು.


ಜನರ ಜತೆಗಿರುವೆ: ಶಾಸಕನಾಗಿ ನಾನು ಸದಾ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಅರಿತುಕೊಂಡು ಪರಿಹಾರ ಕೊಡಿಸುವ ಸೇವೆ ಮಾಡುತ್ತಿದ್ದೇನೆ. ಎಲ್ಲೋ ಕುಳಿತು ಏನೋ ಮಾತನಾಡುವ ಜಾಯಮಾನ ನನ್ನದಲ್ಲ. ಜನರಲ್ಲೇ ಒಬ್ಬನಾಗಿ ಇರಲು ಬಯಸುವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರ ಆರೋಪಗಳಿಗೆ ತಿರುಗೇಟು ನೀಡಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷ ಎಸ್.ಎನ್. ಸಿದ್ದಾರ್ಥ, ಎಪಿಎಂಸಿ ಮಾಜಿ ಅಧ್ಯಕ್ಷ ದೊಡ್ಡೇಬಾಗಿಲು ಮಹದೇವಯ್ಯ, ಕುರುಬ ಸಮುದಾಯದ ಹಿರಿಯ ಮುಖಂಡ ಮೂಗೂರು ಶಿವಮೂರ್ತಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಉಕ್ಕಲಗೆರೆ ಅಡುಗೆ ಕುಮಾರ್, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಗುರುರಾಜ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶಿವಲಿಂಗಯ್ಯ ಮತ್ತಿತರರಿದ್ದರು.