ನ್ಯೂಸ್

ಅರ್ಥ ಪೂರ್ಣವಾಗಿ ಅದ್ದೂರಿಯಾಗಿ ಕನಕ ಜಯಂತಿ ಆಚರಣೆ

ಜಿಲ್ಲೆಯಲ್ಲಿ ಕನಕದಾಸರ 538 ಜನ್ಮ ದಿನಾಚರಣೆ ಅಂಗವಾಗಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಕನಕ ಜಯಂತಿಯನ್ನು ಆಚರಣೆ ಮಾಡಲಾಗುವುದು. ಕನಕದಾಸರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ತಿಳಿಸಿದರು.

 ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ವೇದಿಕೆ ಕಾರ್ಯಕ್ರಮ ನವೆಂಬರ್ 08 ರಂದು ಮಧ್ಯಾಹ್ನ 12.00 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು.

 ಬೆಳಗ್ಗೆ 9 ಗಂಟೆಗೆ ಕೋಟೆ ಆಂಜನೇಯ ದೇವಸ್ಥಾನದ ಬಳಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಲಾ ತಂಡಗಳನ್ನು ನೀಡಲಾಗುವುದು. ಮೆರವಣಿಗೆಗೆ ಮೌಂಟೆಡ್ ಪೊಲೀಸ್ ಬ್ಯಾಂಡ್ ವ್ಯವಸ್ಥೆ ಮಾಡಲಾಗುವುದು. ಮೆರವಣಿಗೆಯಲ್ಲಿ ಕನಕದಾಸರ ಟ್ಯಾಬ್ಲೋ ಸಾಗುವುದು ಎಂದು ತಿಳಿಸಿದರು.

 ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯಕ್ಕೆ ಸ್ವಾಮೀಜಿ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಲಾಗುವುದು ಎಂದರು.