ನ್ಯೂಸ್

ಅರ್ಥ ಪೂರ್ಣವಾಗಿ ಅದ್ದೂರಿಯಾಗಿ ಬಸವಣ್ಣನವರ ಜಯಂತಿ ಆಚರಣೆ

ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭವರ, ಸಾಧಕರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ತಿಳಿಸಿದರು

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬಸವಣ್ಣನವರ ಜಯಂತಿ ಆಚರಣೆ ಸಂಬoಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಏಪ್ರಿಲ್ 30 ರಂದು ಬೆಳಗ್ಗೆ 10 ಗಂಟೆಗೆ ಗನ್ ಹೌಸ್ ಸರ್ಕಲ್ ನಲ್ಲಿನ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಗುವುದು ನಂತರ ಬೆಳಗ್ಗೆ 11.00 ಗಂಟೆಗೆ ಬಸವಣ್ಣನವರ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

 ಗನ್ ಹೌಸ್ ಸರ್ಕಲ್ ನಲ್ಲಿನ ಬಸವೇಶ್ವರರ ಪ್ರತಿಮೆಯ ಸ್ಥಳದ ಆವರಣದಲ್ಲಿ ಶಾಮಿಯಾನ ಸ್ವಚ್ಚತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಸೂಚನೆ ನೀಡಿದರು.

ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ ಎಂ ಸುದರ್ಶನ್ ಅವರು ಮಾತನಾಡಿ ಜಯಂತಿ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ವಚನ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಬಸವಣ್ಣನವರ ಜಯಂತಿ ಆಚರಣೆಯ ದಿವ್ಯ ಸಾನಿಧ್ಯಕ್ಕೆ ಸಮುದಾಯದ ಸ್ವಾಮೀಜಿ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸಮುದಾಯದ ಮುಖಂಡರಾದ ಕೆ ಎನ್ ಪುಟ್ಟಬುದ್ಧಿ, ಮೂಗೂರು ನಂಜುoಡಸ್ವಾಮಿ, ಬಿ ಕೆ ನಾಗರಾಜ್, ಬಾಬು ಹಾಗೂ ಶಿವಶಂಕರ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.