ಹನೂರಿನಲ್ಲಿ ಶಾಸಕ ಆರ್.ನರೇಂದ್ರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಧಿಕಾರಿಗಳು ಭಾಗಿಯಾಗಿದ್ದರು. ಶಿವರಾಜು, ಶ್ರೀನಿವಾಸ್, ಮೂರ್ತಿ ಸುಂದರಮ್ಮ ಇತರರು ಇದ್ದರು.  
ನ್ಯೂಸ್

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಿ


ಅಧಿಕಾರಿಗಳಿಗೆ ಶಾಸಕ ಆರ್.ನರೇಂದ್ರ ಸೂಚನೆ

ಹನೂರು: ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಆರ್.ನರೇಂದ್ರ ಸಲಹೆ ನೀಡಿದರು.

ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1 ರಂದು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಇಲಾಖೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ವಹಿಸಬೇಕು. ಜತೆಗೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕ ಗಳಿಸಿರುವ ಶೈಕ್ಷಣಿಕ ವಲಯ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.