ಚಿತ್ರದುರ್ಗ: ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ಅಲೆಮಾರಿಗಳ ಬಗ್ಗೆ ಕಾಳಜಿ ವಹಿಸಿ,ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸ ಬೇ ಕೆಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.
ಡಿಸಿ ಕಚೇರಿಯಲ್ಲಿ ಗುರುವಾರ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,ಭಾಷೆ, ಕೌಶಲ,ಪರಂಪರೆ,ಪಾ ರಂಪರಿಕ ವೃತ್ತಿಯಿಂದ ಜೀವನ ನಡೆಸುತ್ತಿರುವ ಅಲೆಮಾರಿ ಸಮುದಾಯದವರು ಈ ದೇಶದ ಮೂಲನಿವಾಸಿಗಳಾಗಿದ್ದಾರೆ. ಅವರಿಗೆ ನೆ ಲೆ,ಶಿಕ್ಷಣ ಸಹಿತ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಂತೆ ಅ ಧಿಕಾರಿಗಳು ಕಾರ್ಯನಿರ್ವಹಿಸಿ,ಸೌಲಭ್ಯಗಳನ್ನು ಕಾಲಮಿತಿಯೊಳಗೆ ಫಲಾನುಭವಿಗಳಿಗೆ ತಲುಪಿಸಬೇಕೆಂದು ಸೂಚಿಸಿದರು.
ತಾಲೂಕುವಾರು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬಗಳ ಸಂಖ್ಯೆ ಮಾಹಿತಿ,ನಿವೇಶನ ರಹಿತರ ಪಟ್ಟಿ ತಯಾರಿ ಸ ಬೇಕು. ಜಾತಿವಾರು ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ತಾಪಂ ಇಒಗಳು ಖುದ್ದು ನಿಗಾ ವ ಹಿಸಿ ಪರಿಶೀಲಿಸಬೇಕೆಂದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್‌ಹೆಬ್ಬಳ್ಳಿ ಮಾತನಾಡಿ,2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 15,492 ಪರಿ ಶಿಷ್ಟ ಜಾತಿಯ ಅಲೆಮಾರಿ ಸಮುದಾಯದವರಿದ್ದಾರೆ. ಇವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರಚ,ಕೊರಮ, ಬುಡ್ಗ ಜಂಗಮ, ಸುಡುಗಾ ಡು ಸಿದ್ದರು,ಹಂದಿಜೋಗೀಸ್,ಶಿಳ್ಯಕ್ಯಾತಾಸ್,ಚೆನ್ನದಾಸರ್ ಇದ್ದಾರೆ. 251 ಪರಿಶಿಷ್ಟ ಪಂಗಡದ ಮೇದಾರ ಅಲೆಮಾರಿ ಸಮುದಾಯದ ವರು ಇದ್ದಾರೆ. 2021-22ನೇ ಸಾಲಿನ ವಸತಿ ಯೋಜನೆಯಡಿ ಅಲೆಮಾರಿ ಸಮುದಾಯದವರ ಮನೆ ನಿರ್ಮಾಣಕ್ಕಾಗಿ ಪರಿಶಿಷ್ಟ ಜಾತಿಯ 83 ಹಾಗೂ ಪರಿಶಿಷ್ಟ ಪಂಗಡದ 6 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. 83 ಫಲಾನುಭವಿಗಳ ಪೈಕಿ 9 ಫಲಾನುಭವಿಗಳ ಮಾಹಿತಿಯನ್ನು ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಒದಗಿಸಲಾಗಿದೆ. ತಾಂತ್ರಿಕ ಸಮಸ್ಯೆಯಿಂದ 74 ಫಲಾನುಭವಿಗಳ ಮಾಹಿತಿ ಕೊಡಲು ಸಾಧ್ಯವಾಗಿಲ್ಲ. ಪರಿಶಿಷ್ಟ ಪಂಗಡದ 6 ಫಲಾನುಭವಿಗಳ ಪೈಕಿ ಮೂವರಿಗೆ ಅರ್ಹತೆ ಇರುವುದಿಲ್ಲ ಎಂದರು.
ಜಿಲ್ಲೆಯ ಎಲ್ಲ ಕ್ರೈಸ್ ವಸತಿ ಶಾಲೆ ಮತ್ತು ಆಶ್ರಮ ಶಾಲೆಗಳಲ್ಲಿ ಶೇ.10 ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡ ಬೇಕು ಎಂಬ ನಿರ್ದೇಶನವಿದೆ. ಹೆಚ್ಚಿನ ಜಾಗೃತಿ ಕಾರ‌್ಯಕ್ರಮಗಳ ಮಕ್ಕಳು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಕ್ರಮ ವಹಿಸ ಬೇಕೆಂದು ಅಧ್ಯಕ್ಷರು ಹೇಳಿದರು.
ಕ್ರೈಸ್ ವಸತಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿಯ 43,ಹಿಂದುಳಿದ ವರ್ಗದ 513 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳು ಪ್ರವೇಶ ಪ ಡೆದಿದ್ದಾರೆ.ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೆಬ್ಬಳ್ಳಿ ತಿಳಿಸಿದರು.
ಎಡಿಸಿ ಬಿ.ಟಿ.ಕುಮಾರಸ್ವಾಮಿ,ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಆನಂದ್,ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮಹೇಂದ್ರ ಕು ಮಾರ್,ಶಿಕ್ಷಣ ಇಲಾಖೆಯ ವೆಂಕಟೇಶ್,ಲೀಡ್‌ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಸಿ.ಟಿ.ಕುಮಾರಬಾಬು,ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ದ ಜಿಲ್ಲಾ ವ್ಯವಸ್ಥಾಪಕಿ ಪ್ರೇಮಾ,ಜಿಪಂ ಸಿಪಿಒ ಗಾಯತ್ರಿ ಮತ್ತಿತರ ಅಧಿಕಾರಿಗಳು, ಹಾಗೂ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಇದ್ದರು.
(ಸಿಟಿಡಿ 19 ಪ್ರಗತಿ ಪರಿಶೀಲನಾ ಸಭೆ)
ಚಿತ್ರದುರ್ಗದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ,ಎಡಿಸಿ ಬಿ.ಟಿ.ಕುಮಾರಸ್ವಾಮಿ,ಆನಂದ್,ಸಿ.ಟಿ.ಕುಮಾರಬಾಬು,ಗಾಯತ್ರಿ,ಪ್ರೇಮಾ, ಜಗದೀಶ್ ಹೆಬ್ಬಳ್ಳಿ ಇತರರು ಇದ್ದರು.
---