ನ್ಯೂಸ್

ಆಟೋ ಚಾಲಕರಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಚಾಮರಾಜನಗರದ ಪಚ್ಚಪ್ಪ ವೃತ್ತದಲ್ಲಿ ಶ್ರೀಭುವನೇಶ್ವರಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಶನಿವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಿಂಚು ನಾಗೇಂದ್ರ, ಆಟೋ ಚಾಲಕರಾದ ಅಭಿ, ಚಂದ್ರಶೇಖರ್, ನಾಗಿ, ಉಮೇಶ್, ಶಿವು, ರಂಗಸ್ವಾಮಿ ಇತರರಿದ್ದರು.