ನ್ಯೂಸ್

ಆಟೋಗಳ ಸಂಚಾರಕ್ಕೆ ಕಡಿವಾಣ ಹಾಕಿ

ತಿ.ನರಸೀಪುರ: ಪ್ರಯಾಣಿಕರನ್ನು ಮೈಸೂರಿನವರೆಗೆ ಆಟೋಗಳಲ್ಲಿ ಕರೆದೊಯ್ಯುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ ತೊಂದರೆ ಎದುರಾಗಿದ್ದು, ಜಿಲ್ಲಾಡಳಿತ ಈ ಬಗ್ಗೆ ಕ್ರಮವಹಿಸಬೇಕೆಂದು ಖಾಸಗಿ ಬಸ್ ಕಾರ್ಮಿಕರು ಮನವಿ ಮಾಡಿದ್ದಾರೆ.

ತಾಲೂಕಿನಿಂದ ಮೈಸೂರು ಕೊಳ್ಳೇಗಾಲ, ಚಾಮರಾಜನಗರ ಸೇರಿದಂತೆ ವಿವಿಧೆಡೆಗೆ ಖಾಸಗಿ ಬಸ್‌ಗಳ ಸಂಚಾರವಿದ್ದು, ಸುಮಾರು 2,000ಕ್ಕು ಹೆಚ್ಚು ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ.

ಲಾಕ್‌ಡೌನ್ ತೆರವಾದ ಬಳಿಕ ಸರ್ಕಾರ ಖಾಸಗಿ ಬಸ್ ಸಂಚಾರಕ್ಕೆ ಅನುವು ನೀಡಿದ ಹಿನ್ನೆಲೆಯಲ್ಲಿ 20 ಬಸ್‌ಗಳ ಸಂಚಾರ ಆರಂಭವಾಗಿದೆ. ಈ ನಡುವೆ ಆಟೋ ಚಾಲಕರು ಅಲ್ಲಲ್ಲಿ 15ಕ್ಕೂ ಹೆಚ್ಚು ಜನರನ್ನು ಕರೆದುಕೊಂಡು ಹೊಗುತ್ತಿರುವುದರಿಂದ ಬಸ್‌ಗಳಿಗೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟವಾಗಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಕ್ರಮ ವಹಿಸಬೇಕು ಎಂದು ನಿರ್ವಾಹಕ ರೇವಣ್ಣ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.