ನಗರದ ಸಯ್ಯಜಿರಾವ್ ರಸ್ತೆಯ ಹೈವೇ ವೃತ್ತದ ಬಳಿ ಗುರುವಾರ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ ಆಟೋರಿಕ್ಷಾ ಚಾಲಕ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇದರ ಬ್ಲಾಕ್‌ನ ನಿವಾಸಿ, ಚಾಲಕ ವಿಜಯ್‌ಕುಮಾರ್ ಹಲ್ಲೆಗೊಳಾಗಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಲ್‌ನ ರಸ್ತೆಯಲ್ಲಿ ಪುರುಷೋತ್ತಮ್ ಎಂಬಾತ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇಲ್ಲಿ ಮೂತ್ರ ವಿಸರ್ಜನೆ ಮಾಡದೆ ಬೇರೆ ಮಾಡುವಂತೆ ಹೇಳಿದ್ದಕ್ಕೆ ನನ್ನ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.