ಅರಸೀಕೆರೆ: ಕ್ರೀಡಾಪಟುಗಳು ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದರೆ ಗೆಲುವು ಸಾಧಿಸಲು ಸಾಧ್ಯವಿದೆ ಎಂದು ಪದವಿ ಪೂರ್ವ ಶಿಕ್ಷ ಇಲಾಖೆಯ ಜಿಲ್ಲಾ ಉಪನಿದೇರ್ಶಕ ಸಿ.ಎಂ.ಮಹಾಲಿಂಗಯ್ಯ ಹೇಳಿದರು.
ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪಪೂ ಕಾಲೇಜು ಹಂತದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರೋನಾ ಕಾರಣದಿಂದಾಗಿ ಎರಡು ವರ್ಷದಿಂದ ಸ್ಥಗಿತಗೊಂಡಿದ್ದ ಆಟೋಟ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಪಾಲ್ಗೊಂಡು ಯಶಸ್ಸು ಸಾಧಿಸಿ ಕ್ರೀಡಾಸ್ಫೂರ್ತಿ ಪ್ರದರ್ಶಿಸಬೇಕು ಎಂದು ಕರೆ ನೀಡಿದರು.
ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಗೋಪಾಲ್, ಕ್ರೀಡಾ ಕಾರ್ಯದರ್ಶಿ ರೇವಣಸಿದ್ದಪ್ಪ, ಸಚ್ಚಿದಾನಂದ ಸೇರಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.