ಎನ್.ಆರ್.ಪುರ: ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ತಡೆಯಲು ರೈಲ್ವೆ ಬ್ಯಾರಿಕೇಡ್ ಹಾಗೂ ಸೋಲಾರ್ ಟೆಂಟಿಕಲ್ ೆನ್ಸಿಂಗ್ ಮಾಡಲು 61.62 ಕೋಟಿ ರೂ. ಬಿಡುಗಡೆ ಮಾಡುವಂತೆ ಶಾಸಕ ಟಿ.ಡಿ.ರಾಜೇಗೌಡ ಅವರು ಬುಧವಾರ ಬೆಂಗಳೂರಿನಲ್ಲಿ ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.
ಭದ್ರಾ ಹುಲಿ ಸಂರಕ್ಷಿತ ಯೋಜನೆಗೆ ಹೊಂದಿಕೊಂಡಿರುವ ಎನ್.ಆರ್.ಪುರ ತಾಲೂಕಿನ ವ್ಯಾಪ್ತಿಯಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗಟ್ಟಲು ಅವಶ್ಯವಿರುವ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಎನ್.ಆರ್.ಪುರ ವಲಯ ಅರಣ್ಯಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 25 ಕಿ.ಮೀ. ಉದ್ದದ ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ 37.50 ಕೋಟಿ ರೂ, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ 15 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್‌ಗೆ 22.50 ಕೋಟಿ, ಎನ್.ಆರ್.ಪುರ ಅರಣ್ಯಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 9 ಕಿ.ಮೀ. ಉದ್ದದ ಸೋಲಾರ್ ಟೆಂಟಿಕಲ್ ಫೆನ್ಸಿಂಗ್ ಮಾಡಲು 54 ಲಕ್ಷ, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 9 ಕಿ.ಮೀ. ಉದ್ದದ ಸೋಲಾರ್ ಟೆಂಟಿಕಲ್ ಫೆನ್ಸಿಂಗ್ ಅಳಡಿಸಲು 54 ಲಕ್ಷ ಹಾಗೂ ಬಾಳೆಹೊನ್ನೂರು ವಲಯ ಅರಣ್ಯಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 9 ಕಿ.ಮೀ. ಉದ್ದ ಸೋಲಾರ್ ಟೆಂಟಿಕಲ್ ಫೆನ್ಸಿಂಗ್ ಅಳವಡಿಸಲು 54 ಲಕ್ಷ ಸೇರಿ ಒಟ್ಟು 61.62 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಎನ್.ಆರ್.ಪುರ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಇದ್ದರು.