ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು ‘ಗರುಡಾಕ್ಷಿ’ ಆನ್‌ಲೈನ್ ಎಫ್‌ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಮಂಗಳವಾರ ಈ ಸೇವೆ ಉದ್ಘಾಟನೆಯಾಗಲಿದೆ.
ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ.
ಈಗಾಗಲೇ ರಾಜ್ಯ ಪೊಲೀಸ್ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲಿ ಸಹ ಪ್ರಥಮ ವರ್ತಮಾನ ವರದಿಯನ್ನು (ಎ್ಐಆರ್)ಗಳನ್ನು ಆನ್‌ಲೈನ್ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಲಾಗುತ್ತದೆ.
ಅರಣ್ಯ ಇಲಾಖೆಯು ವೈಲ್ಡ್ ಲ್ೈ ಟ್ರಸ್ಟ್ ಆ್ ಇಂಡಿಯಾ ಸಹಯೋಗದೊಂದಿಗೆ ಗರುಡಾಕ್ಷಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.
ಈ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗತ್ತದೆ. ನಂತರ ಇದನ್ನು ಹಂತ ಹಂತವಾಗಿ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುವುದು.
ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಗರುಡಾಕ್ಷಿ ಸೇವೆಗೆ ಚಾಲನೆ ನೀಡುವರು.
ಕೋಟ್...
ಗರುಡಾಕ್ಷಿ ಆನ್‌ಲೈನ್ ಎಫ್‌ಐಆರ್ ವ್ಯವಸ್ಥೆ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ ಅಪರಾಧ ತಡೆಯಲು ಇಲಾಖೆಗೆ ಬಲ ತುಂಬಲಿದೆ.
- ಈಶ್ವರ ಖಂಡ್ರೆ, ಅರಣ್ಯ ಸಚಿವ