ನ್ಯೂಸ್

ಆರ್‌ಎಸ್‌ಎಸ್ ಕೈವಾಡ ಮಾತಿಗೆ ಈಗಲೂ ಬದ್ಧ

ನಗರದ ಉದಯಗಿರಿಯಲ್ಲಿ ಸೋಮವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣದ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂಬ ಮಾತಿಗೆ ನಾನು ಈಗಲೂ ಬದ್ಧ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಪೊಲೀಸರು ಅಪ್ರಾಪ್ತ ಸೇರಿ ಒಂದು ಸಾವಿರ ಜನರ ಮೇಲೆ ಎಫ್‌ಐಆರ್ ಮಾಡಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನು ಬಂಧನ ಮಾಡುತ್ತಾರೆ ಎಂಬ ಮಾಹಿತಿ ಇಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪೊಲೀಸ್ ಠಾಣೆ ಮುಂಭಾಗ ಒಂದು ಸಾವಿರ ಜನರು ಇದ್ದರಾ?. ಅಷ್ಟು ಜನ ಇದ್ದರು ಎಂಬುದಕ್ಕೆ ನಿಮ್ಮ ಬಳಿ ಮಾಹಿತಿ ಇದೆಯಾ?. ಪ್ರತಿಪಕ್ಷ ನಾಯಕರು, ಮಾಜಿ ಎಂಎಲ್ಎಗಳು, ಪೊಲೀಸ್ ಠಾಣೆ ಒಳಗೆ ಸಭೆ ಮಾಡುತ್ತಾರೆ. ಪೊಲೀಸ್ ಠಾಣೆ ಒಳಗೆ ಸಭೆ ಮಾಡಲು ಅವಕಾಶ ಇದೆಯಾ?. ನಮ್ಮನ್ನು ಏಕೆ ಒಳಗೆ ಬಿಡಲಿಲ್ಲ?. ಘಟನೆ ಸಂಬಂಧ ಬೆಳಗ್ಗೆ 10.30ಕ್ಕೆ ದೂರು ಕೊಡಲು ಬಂದಾಗ ದೂರು ತೆಗೆದುಕೊಂಡಿಲ್ಲ. ಪೊಲೀಸರು ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಅವರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ. ಧರ್ಮದ ಬಗ್ಗೆ ಅವಹೇಳನ ಮಾಡಲಾಗಿದೆ ಎಂದರು.

ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಜೋಕರ್ಸ್‌. ಛಲವಾದಿ ನಾರಾಯಣಸ್ವಾಮಿಗೆ ಎಂಎಲ್‌ಸಿ ಸ್ಥಾನ ಕೊಟ್ಟಿರೋದು ಆರ್‌ಎಸ್‌ಎಸ್‌ನ ಚಡ್ಡಿ ಹೊತ್ತು ಓಡಾಡಲು. ಕಾಂಗ್ರೆಸ್ ನಾಯಕರನ್ನು ಬೈಯಲು ನಿಮ್ಮನ್ನು ಇರಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಒನ್ ಸೈಡ್ ಕೆಲಸ ಮಾಡಬಾರದು. ಸುರೇಶ್ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ಆಗಬೇಕು. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಈಗ ಪೊಲೀಸರು ಬಂಧಿಸಿರುವ ಪೈಕಿ ಕೆಲವರು ಮುಗ್ಧರು ಇದ್ದಾರೆ. ಆರ್.ಅಶೋಕ್ ಧಮ್ಕಿಗೆ ಹೆದರಿ ಪೊಲೀಸರು ಎಫ್‌ಐಆರ್ ಹಾಕಿದ್ದಾರೆ ಎಂದರು.