ಚಿತ್ರದುರ್ಗ: ನಗರದ ಮೇಗಳಹಳ್ಳಿ ಬಳಿಯ ಆಶ್ರಯ ಮನೆಗಳ ನಿರ್ಮಾಣ ಸ್ಥಳಕ್ಕೆ ನಗರ ಆಶ್ರಯ ಸಮಿತಿ ಅಧ್ಯಕ್ಷ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಅ ವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ, ಶೀಘ್ರ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಮೇಗಳಹಳ್ಳಿ ರಿ.ಸರ್ವೆ ನಂ.22ರ 15.20 ಎಕರೆ ಜಮೀನಿನಲ್ಲಿ 1001 ಸಂಖ್ಯೆಯ ಜಿ+2 ಮಾದರಿಯ ಮನೆಗಳನ್ನು ನಿರ್ಮಾಣ ಮಾ ಡ ಲಾಗುತ್ತಿದ್ದು, ಕಾಮಗಾರಿ ತ್ವರಿತಗೊಳಿಸಬೇಕು. ಈಗಾಗಲೆ 714 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಎಎಚ್‌ಪಿ ಯೋಜನೆಯಡಿ 2022ನೇ ಸಾಲಿನಲ್ಲಿ ಮನೆ ನಿರ್ಮಾಣಕ್ಕೆ ಗುತ್ತಿಗೆಗೆದಾರರಿಗೆ ಕಾರ್ಯಾದೇಶ ನೀಡಲಾಗಿದ್ದರೂ ಈ ವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
2026ರ ಮಾರ್ಚ್ ಅಂತ್ಯದೊಳಗೆ ಎಲ್ಲ ಮನೆಗಳನ್ನು ನಿರ್ಮಿಸಲಾಗುವುದು ಎಂದು ಗುತ್ತಿಗೆದಾರರು ಪ್ರತಿಕ್ರಿಯಿಸಿದರು.
ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಅಧಿಕಾರಿ, ಸಿಬ್ಬಂದಿ, ಮೆದೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್‌ಕುಮಾರ್ ಮತ್ತಿತರರು ಇದ್ದರು.