ಹೊಳೆನರಸೀಪುರ: ವಿದ್ಯಾರ್ಥಿ ಜೀವನದಲ್ಲಿ ಆಸಕ್ತಿಯಿಂದ ಓದಿದರೆ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಎಚ್.ಎಸ್. ಪುಟ್ಟಸೋಮಪ್ಪ ಹೇಳಿದರು.
ತಾಲೂಕಿನ ಜೋಡಿಗುಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೋಮವಾರ ಏರ್ಪಡಿಸಿದ್ದ ನಾನು ಓದಿದ ಪುಸ್ತಕ ಭಾಷಣ ಸ್ಪರ್ದೆ ಉದ್ಘಾಟಿಸಿ ಮಾತನಾಡಿದರು.
ಪಡವಲಹಿಪ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಮಾರಸ್ವಾಮಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ದಾಸರಾಗುತ್ತಿದ್ದಾರೆ. ಮೊಬೈಲ್, ಟಿವಿ ನೋಡುವುದನ್ನು ಕಡಿಮೆ ಮಾಡಿ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಸ್ನೇಹಾ, ಮಮತಾ, ರಂಜಿತಾ, ಮಹೇಂದ್ರ ಅವರಿಗೆ ತಾಲೂಕು ಕಸಾಪ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ ಬಹುಮಾನ ನೀಡಿದರು. ಮುಖ್ಯ ಶಿಕ್ಷಕ ಮಧುಕೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪರ್ತಕರ್ತರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್‌ಕುಮಾರ್, ಶಿಕ್ಷಕ ಲೋಕೇಶ್, ನಿವೃತ್ತ ನಿಲಯ ಪಾಲಕ ನಿಂಗೇಗೌಡ ಉಪಸ್ಥಿತರಿದ್ದರು.