ಪೋಟೋ ಕ್ಯಾಪ್ಷನ್: ತಿ.ನರಸೀಪುರ ಪಟ್ಟಣದ ರೇಣುಕಾ ಸಭಾ ಭವನದಲ್ಲಿ ತಾಲೂಕು ಗಾಣಿಗರ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಮಾಜದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. 
ನ್ಯೂಸ್

ಆಸ್ತಿ ಮಾಡುವ ಬದಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ

ತಿ.ನರಸೀಪುರ: ಮಕ್ಕಳು ದೇಶದ ಆಸ್ತಿ. ಪಾಲಕರು ಆಸ್ತಿ ಮಾಡದಿದ್ದರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ಆಗ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗುವ ಜತೆಗೆ ಸಮಾಜದ ಉದ್ಧಾರ ಸಾಧ್ಯ ಎಂದು ತಾಲೂಕು ಗಾಣಿಗರ ಸಂಘದ ಅಧ್ಯಕ್ಷ ರಾಮಚಂದ್ರ ಅಭಿಪ್ರಾಯವ್ಯಕ್ತಪಡಿಸಿದರು.

ತಾಲೂಕು ಗಾಣಿಗ ಸಂಘದ 50ನೇ ಸುವರ್ಣ ಮಹೋತ್ಸವದ ಅಂಗವಾಗಿ ಪಟ್ಟಣದ ರೇಣುಕಾ ಸಭಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜಕ್ಕೆ ಕೊಡುಗೆ ನೀಡಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪಾಲಕರು ಮುಂದಾಗಬೇಕು. ಇತ್ತೀಚಿನ ದಿನಗಳಲ್ಲಿ ಪಾಲಕರು ಮಕ್ಕಳ ಶಿಕ್ಷಣವನ್ನು ಚಿಕ್ಕಂದಿನಲ್ಲೇ ಮೊಟಕುಗೊಳಿಸುತ್ತಿದ್ದಾರೆ. ಇದು ಸರಿಯಲ್ಲ. ದೇಶಕ್ಕೆ ಉತ್ತಮ ಪ್ರಜೆ ನೀಡುವಲ್ಲಿ ಪಾಲಕರ ನಿರ್ಧಾರವೂ ಮುಖ್ಯ ಎಂದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಮಾಜದ 38 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ 33 ಗ್ರಾಮಗಳ 235 ಹಿರಿಯ ಮುಖಂಡರು ಹಾಗೂ ಕಾರ್ಯಕ್ರಮದ ಯಶಸ್ಸಿನ ರೂವಾರಿಗಳಾದ ಆನಂದ್ ದಂಪತಿಗಳನ್ನು ಸನ್ಮಾನಿಸಲಾಯಿತು.

ಸಂಘದ ಗೌರವಾಧ್ಯಕ್ಷ ಎಸ್.ಮಹದೇವಶೆಟ್ಟಿ, ಉಪಾಧ್ಯಕ್ಷರಾದ ಜಿ.ನಾರಾಯಣ ಶೆಟ್ಟಿ, ಆರ್.ತಮ್ಮಯ್ಯ, ಖಜಾಂಚಿ ಎಂ.ಮಹದೇವಸ್ವಾಮಿ, ಸಂಘಟನಾ ಕಾರ್ಯದರ್ಶಿಎಂ.ಶಿವರಾಜು, ಸಹಕಾರ್ಯದರ್ಶಿಗಳಾದ ಕೆ.ಎಸ್.ಮಹದೇವ ಸ್ವಾಮಿ, ಸಿ.ಜಯಣ್ಣ,ಆಲಗೂಡು ಎ.ಸಿ.ಪೂರ್ಣಚಂದ್ರ ಮತ್ತಿತರರಿದ್ದರು.