ವಿಜಯವಾಣಿ ಸುದ್ದಿಜಾಲ ಕೋಲಾರ
ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಇಂದಿನಿAದ ಎರಡು ದಿನಗಳ ಕಾಲ ನಗರದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಸಿದ್ದತೆಗಳ ಬಗ್ಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಏ.೫ ಮತ್ತು ೬ ರಂದು ಎರಡು ದಿನಗಳ ಕಾಲ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕ್ರೀಡಾಕೂಟ. ಟಿ.ಚನ್ನಯ್ಯ ರಂಗಮAದಿರ ಹಾಗೂ ಕನ್ನಡ ಭವನದಲ್ಲಿ ಗುಂಪು ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟಗಳ ನಿರ್ವಹಣೆಯಲ್ಲಿ ಯಾವುದೇ ಲೋಪಗಳಾಗದಂತೆ ಕ್ರೀಡಾಕೂಟವನ್ನು ಸಂಘಟಿಸಲು ಅವಶ್ಯಕತೆ ಇರುವ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶನಿವಾರ ಬೆಳಗ್ಗೆ ಕ್ರೀಡಾಕೂಟದಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳು ಸೇರಿದಂತೆ ಗಣ್ಯರಿಂದ ಧ್ವಜಾರೋಹಣ, ಕ್ರೀಡಾಜ್ಯೋತಿ ಸ್ವೀಕಾರ ಕಾರ್ಯಕ್ರಮಗಳು ನಡೆಯಲಿವೆ. ಕ್ರೀಡಾಕೂಟ ಸ್ಥಳದಲ್ಲಿ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸಾ ಸೌಲಭ್ಯ, ವೇದಿಕೆ ಸಹ ಮಾಡಲಾಗಿದೆ. ಕ್ರೀಡಾಪಟುಗಳಿಗೆ ಯಾವುದೇ ಅನಾನುಕೂಲಗಳು ಉಂಟಾಗದAತೆ ಗಮನ ಹರಿಸಲಾಗಿದೆ. ನೋಂದಣಿ ಹಾಗೂ ಊಟದ ವ್ಯವಸ್ಥೆಗೆ ಪ್ರತಿಯೊಂದು ತಾಲೂಕಿಗೂ ಪ್ರತ್ಯೇಕವಾದ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಕೂಟದಲ್ಲಿ ಸುಮಾರು ೧೪೫೦ ಕ್ರೀಡಾ ಪಟುಗಳು ನೋಂದಣಿ ಮಾಡಿಸಿದ್ದಾರೆ ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಯಸ್ಸಿನ ಆಧಾರದಲ್ಲಿ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ನುರಿತ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲು ದೈಹಿಕ ಶಿಕ್ಷಕರ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಕಾರ್ಯದರ್ಶಿ ಸತೀಶ್ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಪ್ರಸಾದ್ ನಗರಸಭೆ ಅಧಿಕಾರಿ ನವಾಜ್ ಮುಂತಾದವರು ಇದ್ದರು.
ಚಿತ್ರ ೦೪ ಕೆ.ಎಲ್.ಆರ್. ೦೪ : ಶನಿವಾರದಿಂದ ೨ ದಿನಗಳ ಕಾಲ ನಡೆಯಲಿರುವ ಸರ್ಕಾರಿ ನೌಕರರ ಕ್ರೀಡಾಕೂಟದ ಕ್ರೀಡಾಂಗಣವನ್ನು ಪರಿಶೀಲಿಸಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್‌ಕುಮಾರ್, ರಾಜ್ಯ ಪರಿಷತ್ತು ಸದಸ್ಯ ಶ್ರೀನಿವಾಸರೆಡ್ಡಿ ಮುಂತಾದವರು ಇದ್ದರು.