ನ್ಯೂಸ್

ಇಂದು ಕರ್ನಾಟಕ ಬಂದ್

ನಗರದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಈಗಾಗಲೇ ಪೊಲೀಸರು ನಗರದಾದ್ಯಂತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದ್ದು, ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಣಿಟ್ಟಿದ್ದಾರೆ.

ರೈತ, ದಲಿತ, ಕಾರ್ಮಿಕ ಸಂಘದ ಐಕ್ಯ ಹೋರಾಟ ಸಮಿತಿ ಸೇರಿದಂತೆ ನೂರಾರು ರೈತಪರ ಸಂಘಟನೆಗಳು ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಕೆ.ಜಿ. ರಸ್ತೆ, ಮೈಸೂರ್ ಬ್ಯಾಂಕ್ ವೃತ್ತದ ಮಾರ್ಗವಾಗಿ ಫ್ರೀಡಂಪಾರ್ಕ್‌ವರೆಗೆ ಬೃಹತ್ ಪ್ರತಿಭಟನೆ ನಡೆಸಲಿವೆ. ಪ್ರತಿಭಟನಾ ರ‌್ಯಾಲಿಯಲ್ಲಿ 5 ಸಾವಿರಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೆಲ ರೈತ ಮುಖಂಡರು 9 ಗಂಟೆಗೆ ಸುಮನಹಳ್ಳಿ ವೃತ್ತದಿಂದ ಮೋಟಾರ್ ಬೈಕ್ ಹಾಗೂ ಕಾರು ರ‌್ಯಾಲಿ ಮೂಲಕ ಮಾಗಡಿ ರಸೆ,್ತ ನಾಯಂಡಳ್ಳಿ ಮೈಸೂರ್ ರಸ್ತೆ, ಮಾರ್ಕೆಟ್ ಮಾರ್ಗವಾಗಿ ಟೌನ್‌ಹಾಲ್ಗೆ ಬಂದು ಸೇರಲಿವೆ.

ಕರ್ನಾಟಕ ಬಂದ್‌ಗೆ ರೈತ ಪರ ಸಂಘಟನೆಗಳಿಗೆ ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಕಾರ್ಮಿಕರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಬೆಂಬಲ ನೀಡಿರುವ ಕಾರಣ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿದೆ.

ಸರ್ಕಾರವು ಸುಗ್ರೀವಾಜ್ಞೆ ಮೂಲಕ ಕೃಷಿ ವಿರೋಧಿ ಕಾಯ್ದೆ ಅಂಗೀಕಾರ ಮಾಡಿರುವುದನ್ನು ವಿರೋಧಿಸಿ ರೈತ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ಜನ ಜೀವನದ ಮೇಲೆ ತೀವ್ರ ಪರಿಣಾಮ ಬೀರಲಿವೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

ವಿಜಯವಾಣಿ ಸುದ್ದಿಜಾಲ ಬೆಂಗಳೂರು:

ಓಲಾ-ಉಬರ್, ಖಾಸಗಿ ಬಸ್, ಲಾರಿ ಸೇವೆಗಳು, ಅಂಗಡಿ ಮುಂಗಟ್ಟುಗಳು, ಮಾಲ್‌ಗಳು, ಆಟೋ, ಏರ್‌ಪೋರ್ಟ್ ಟ್ಯಾಕ್ಸಿ, ಹಣ್ಣು, ತರಕಾರಿ, ಬೀದಿ ಬದಿ ವ್ಯಾಪಾರಗಳು ಮುಚ್ಚಲಿವೆ.

ಯಾವೆಲ್ಲಾ ಸೇವೆ ಇರುವುದಿಲ್ಲ ?

ಅಗತ್ಯ ವಸ್ತುಗಳಾದ ದಿನಪತ್ರಿಕೆ, ಹಾಲು, ಮೆಡಿಕಲ್, ಆಸ್ಪತ್ರೆ ಸೇವೆಗಳು, ಹೋಟೆಲ್ಗಳು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇವೆಗಳು, ಮೆಟ್ರೋ, ರೈಲು, ವಿಮಾನ ಸಂಚಾರ ಸೇರಿ ಅಗತ್ಯ ಸೇವೆಗಳು ಇರಲಿವೆ.

ಏವೆಲ್ಲಾ ಸೇವೆ ಇರಲಿವೆ ?

ಅಂಗನವಾಡಿ ಕಾರ್ಯಕರ್ತೆಯರು, ಕರ್ನಾಟಕ ನವನಿರ್ಮಾಣ ಸೇನೆ, ದಲಿತಪರ ಸಂಘಟನೆಗಳು, ಜನವಾದಿ ಮಹಿಳಾ ಸಂಘಟನೆ, ಕಾರ್ಮಿಕ ಸಂಘಟನೆಗಳು, ಓಲಾ-ಊಬರ್, ಬೀದಿ ಬದಿ ವ್ಯಾಪಾರಿಗಳು, ತರಕಾರಿ ಮತ್ತು ಹಣ್ಣು ಸಗಟು ವರ್ತಕರ ಸಂಘ, ಲಾರಿ ಮಾಲೀಕರ ಸಂಘ, ಕರ್ನಾಟಕ ಅಣ್ಣಾ ಡಿಎಂಕೆ ಪಕ್ಷ, ಕನ್ನಡ ಸಂಘರ್ಷ ಸಮಿತಿ, ಕರ್ನಾಟಕ ಜ್ಯುವೆಲ್ಲರಿ ಅಸೋಶಿಯೇಶನ್ ಸೇರಿ ನೂರಾರು ಸಂಘಟನೆಗಳು ಬೆಂಬಲ ನೀಡಿದೆ. ಹೋಟೆಲ್ ಮಾಲೀಕರ ಸಂಘ, ಆಟೋ ಮತ್ತು ಟ್ಯಾಕ್ಸಿ ಯೂನಿಯನ್, ಪೆಟ್ರೋಲ್ ಬಂಕ್ ಮಾಲೀಕರು, ಖಾಸಗಿ ಬಸ್ ಮಾಲೀಕ ಸಂಘ ಹಾಗೂ ಕೆಲ ಸಂಘಟನೆಗಳು ನೈತಿಕ ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ.

ನೂರಾರು ಸಂಘಟನೆ ಬೆಂಬಲ: