ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಶನಿವಾರ(ಡಿ.26) ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಾಸಿಕ ಜನಸಂಪರ್ಕ ದಿವಸ ನಡೆಯಲಿದೆ.
ತಿಲಕನಗರ ಠಾಣೆಯಲ್ಲಿ ನಡೆಯಲಿರುವ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್. ಮುರುಗನ್, ಆಗ್ನೇಯ ವಿಭಾಗ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಭಾಗವಹಿಸಲಿದ್ದಾರೆ. ಚಾಮರಾಜಪೇಟೆ ಸಿಸಿಬಿ ಕಚೇರಿಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸದಾಶಿವನಗರ ಠಾಣೆಯಲ್ಲಿ ಕೇಂದ್ರ ವಿಭಾಗ ಡಿಸಿಪಿ ಎಂ.ಎನ್. ಅನುಚೇತ್, ಕಲಾಸಿಪಾಳ್ಯ ಠಾಣೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್, ಸುಬ್ರಮಣ್ಮನಗರ ಠಾಣೆಯಲ್ಲಿ ಉತ್ತರ ವಿಭಾಗ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ, ಬಾಗಲೂರು ಠಾಣೆಯಲ್ಲಿ ಈಶಾನ್ಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ, ಜಯನಗರ ಠಾಣೆಯಲ್ಲಿ ಹರೀಶ್ ಪಾಂಡೇ ಮತ್ತು ಎಚ್‌ಎಎಲ್ ಠಾಣೆಯಲ್ಲಿ ನಡೆಯುವ ಸಭೆಯಲ್ಲಿ ವೈಟ್‌ಫೀಲ್ಡ್ ವಿಭಾಗ ಡಿಸಿಪಿ ಡಿ.ದೇವರಾಜ್ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಮಾಸಿಕ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.