ಪಂಚನಹಳ್ಳಿ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸೇವಾ ದೀಕ್ಷಾ ಕಾರ್ಯಕ್ರಮವನ್ನು ಸೂರಿ ಶ್ರೀನಿವಾಸ್ ಉದ್ಘಾಟಿಸಿದರು. ಪರಮೇಶ್ವರ್, ಪ್ರಕಾಶ್, ವೆಂಕಟೇಶ್, ಪಿ.ಆರ್.ರಂಗನಾಥ್, ಸಿಕೆಒ ರಾಘವೇಂದ್ರ, ಜಯಸ್ವಾಮಿ ಇದ್ದರು. 
ನ್ಯೂಸ್

ಇಚ್ಛಾಶಕ್ತಿ ಇದ್ದಲ್ಲಿ ಸಾಧನೆ

ಪಂಚನಹಳ್ಳಿ: ಜೀವನದಲ್ಲಿ ದೃಢ ಸಂಕಲ್ಪ ಹಾಗೂ ಇಚ್ಛಾಶಕ್ತಿ ಇದ್ದಲ್ಲಿ ಯಾವುದೇ ಕಾರ್ಯದಲ್ಲೂ ಯಶಸ್ಸು ಸಾಧಿಸಬಹುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಪಂಚನಹಳ್ಳಿ ಪಿಎಂಶ್ರೀ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಕಸಾಪ ಹೋಬಳಿ ಮಟ್ಟದ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕನ್ನಡ ನಾಡು ನುಡಿ ಸಂರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ ಶ್ರಮಿಸುತ್ತಿದೆ. ನಮ್ಮ ಭಾಷೆ, ಸಂಸ್ಕೃತಿ ಉಳಿಸಲು ಪ್ರತಿ ಗ್ರಾಮ ಮಟ್ಟದಲ್ಲೂ ಅರಿವು ಮೂಡಿಸಿ ಎಲ್ಲರನ್ನೂ ಜಾಗೃತಿಗೊಳಿಸಬೇಕು. ಕನ್ನಡ ಭಾಷೆ, ನೆಲ, ಸಂಸ್ಕೃತಿಗೆ ತನ್ನದೇ ಆದ ಇತಿಹಾಸವಿದ್ದು ಅದನ್ನು ಕಾಪಾಡಿ ಮುಂದಿನ ತಲೆಮಾರಿಗೆ ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ತಿಳಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಪರಮೇಶ್ವರ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಲ್ಲಿ ಉತ್ತಮ ಸಂಘಟನೆ ಮಾಡಲು ಸಾಧ್ಯ. ಗ್ರಾಮೀಣ ಭಾಗದಲ್ಲಿ ಕನ್ನಡ ನಾಡು, ನುಡಿಯಲ್ಲಿ ಸಾಧನೆ ಮಾಡಿದಂಥವರನ್ನು ಗುರುತಿಸಬೇಕು ಎಂದು ತಿಳಿಸಿದರು.

ಹೋಬಳಿ ಘಟಕದ ನಿಕಟಪೂರ್ವ ಅಧ್ಯಕ್ಷ ಬಿ.ವಿ.ರವಿಚಂದ್ರ ಕನ್ನಡ ಧ್ವಜವನ್ನು ಪಿ.ಎಂ.ಜಯಸ್ವಾಮಿ ಅವರಿಗೆ ಹಸ್ತಾಂತರಿಸುವ ಮೂಲಕ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ಜಿಲ್ಲಾ ಕಸಾಪ ಕೋಶಾಧ್ಯಕ್ಷ ಬಿ.ಪ್ರಕಾಶ್, ಎಸ್.ಎಸ್.ವೆಂಕಟೇಶ, ಗ್ರಾಪಂ ಅಧ್ಯಕ್ಷ ಪಿ.ಆರ್.ರಂಗನಾಥ್, ವಡೇರಹಳ್ಳಿ ಅಶೋಕ್, ಸಿಂಗಟಗೆರೆ ಸಿದ್ದಪ್ಪ, ಸಿಕೆಒ ರಾಘವೇಂದ್ರ, ರೂಪಾ ಶ್ರೀನಿವಾಸ್, ಸಂತೋಷ್, ರೇವಣ್ಣ, ಜಯದೇವ್, ಬಸವರಾಜ್, ಲೋಕೇಶ್, ಗೀತಾ, ಸಂಜಯ್ ಇದ್ದರು.