ಇ-ಸ್ವತ್ತು ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಪಾಲಿಕೆಯ ವಲಯ ಕಚೇರಿಯ ನಾಲ್ಕರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವಲಯ ಕಚೇರಿ ನಾಲ್ಕರಲ್ಲಿ ಸಾರ್ವಜನಿಕರೊಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದು, ಅದಕ್ಕೆ ನಂದೀಶ್ ಮತ್ತು ರಜಾಕ್ 25 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಶನಿವಾರ ಇಬ್ಬರು ನೌಕರರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆೆಕ್ಟರ್ ಪಿ.ಉಮೇಶ್, ಲೋಕೇಶ್, ರವಿಕುಮಾರ್, ಸಿಬ್ಬಂದಿ ಆರ್.ಎನ್.ಲೋಕೇಶ್, ಎಚ್.ಎನ್.ಗೋಪಿ, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್ ಗೌಡ, ಮೋಹನ್ ಕುಮಾರ್, ಲೋಕೇಶ್, ದಿನೇಶ್ ಇದ್ದರು.