ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 02 ಕೊನೆಯ ದಿನಾಂಕವಾಗಿರುತ್ತದೆ.
ಜಿಲ್ಲಾ MIS ಸಮಾಲೋಚಕರು ಹುದ್ದೆಗೆ The candidate is require to post Gradute in statistics /M.C.A/ M.SC. Computer science/ BE computer science from a recognized university ony. 3-5 years of relevant experience in data management data research preferably in the developmental sectors ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರಬೇಕು. ಮಾಸಿಕ ಸಮಾಲೋಚನಾ ಶುಲ್ಕ Rs.25,000 to Rs.30,000/- ವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯ್ಕೆ ವಿಧಾನ ಮತ್ತು ಷರತ್ತುಗಳಿಗೆ ಕಾರ್ಯನಿರ್ವಾಹಕ ಇಂಜಿನೀಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮೈಸೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ, ಕಾರ್ಯಪಾಲಕ ಅಭಿಯಂತರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.