ಈ ಕ್ಷೇತ್ರಗಳಿಗೆ ಅ.28 ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದೆ.
ವಿಧಾನ ಪರಿಷತ್‌ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದ್ದು, ಗುರುವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ವಿಧಾನ ಪರಿಷತ್ ಸದಸ್ಯರಾದ ಆರ್.ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರ್ ಮತ್ತು ಪುಟ್ಟಣ್ಣ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದೆ. ಅ.9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.12ರವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ನವೆಂಬರ್ 2ರಂದು ಮತ ಎಣಿಕೆಯಾಗಲಿದೆ.