ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಸನ್ನ ಕುಮಾರ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ತೆರವಾದ ಸ್ಥಾನಕ್ಕೆ ಕೆ. ಜಾನ್ಸನ್ ಅವರನ್ನು ನೇಮಿಸಿದೆ.
ಕೆ.ಜಾನ್ಸನ್ ಅವರು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಂಡಿಎ ಕಾರ್ಯದರ್ಶಿ ಪ್ರಸನ್ನ ಕುಮಾರ್ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಚ್. ಕೇಶವಪ್ರಸಾದ್ ನಿರ್ದೇಶನ ನೀಡಿದ್ದಾರೆ.