ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪರವಾಗಿದೆ. ಹೀಗಿದ್ದರೂ ವಿರೋಧ ಪಕ್ಷಗಳು ಅದನ್ನು ಟೀಕಿಸುತ್ತಿರುವುದು ಕೇವಲ ಆಧಾರ ರಹಿತವಾಗಿದೆ ಎಂದು ನಗರ ಕಾಂಗ್ರೆಸ್ ಕಾನೂನು ವಿಭಾಗದ ಹಿರಿಯ ವಕೀಲ ಜೆ.ಎನ್.ಲಕ್ಷ್ಮಣ್ ಬೇಸರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಯಾವುದೇ ಭೇದ-ಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಅಭಿವೃದ್ಧಿ ಯೋಜನೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಆದರೆ, ಕೆಲವರ ತುಷ್ಟೀಕರಣದ ಬಜೆಟ್ ಎಂದು ಬಿಜೆಪಿಯವರು ಟೀಕಿಸುತ್ತಿದ್ದಾರೆ. ವಾಸ್ತವವಾಗಿ ಈ ಟೀಕೆ ಸುಳ್ಳೆಂಬುದು ಜನರಿಗೆ ಗೊತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.