ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆ-೨ ಸಕಲ ಸಿದ್ಧತೆ/ ಜಿಲ್ಲಾಧಿಕಾರಿ ಅಕ್ರಂ ಪಾಷ

ವಿಜಯವಾಣಿ ಸುದ್ದಿಜಾಲ ಕೋಲಾರ
ಜೂನ್ ೧೪ ರಿಂದ ೨೨ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-೨ನ್ನು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು ೩೮೫ ಪ್ರೌಢಶಾಲೆಗಳಿದ್ದು, ೫೩೪೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.

ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-೨ರ ಕುರಿತು ನಡೆದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ ಸುವ್ಯವಸ್ಥಿತ, ಪಾರದರ್ಶಕ ಹಾಗೂ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಮತ್ತು ಸಾಕ್ಷತರಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಕಾರದಲ್ಲಿ ಪೂರ್ವಸಿದ್ಧತೆಗಳ ಬಗ್ಗೆ ಚರ್ಚಿಸಿದರು.

ಪರೀಕ್ಷಾ ಕೇಂದ್ರದ ಸುತ್ತಲೂ ಪರೀಕ್ಷಾ ದಿನಗಳೆಂದು ೨೦೦ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜೆರಾಕ್ಸ್, ಸೈಬರ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಸೂಚಿಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣಗಳು, ಕುಡಿಯುವ ನೀರು, ನೀರಿನ ಸೌಲಭ್ಯವಿರುವ ಶೌಚಾಲಯಗಳು ಹಾಗೂ ವಿದ್ಯುತ್ ಸಂಪರ್ಕ ಮುಂತಾದ ಮೂಲಸೌಕರ್ಯಗಳನ್ನು ಕುರಿತು ಚರ್ಚಿಸಲಾಯಿತು.

ಬಂಗಾರಪೇಟೆ-೯೯೪, ಕೆ.ಜಿ.ಎಫ್-೧೧೯೮, ಕೋಲಾರ-೧೧೦೭, ಮಾಲೂರು-೮೬೫, ಮುಳಬಾಗಿಲು-೮೨೯ ಹಾಗೂ ಶ್ರೀನಿವಾಸಪುರ-೩೫೩ ಬ್ಲಾಕ್ ಮಟ್ಟದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಬಂಗಾರಪೇಟೆ-೩, ಕೆ.ಜಿ.ಎಫ್-೩, ಕೋಲಾರ-೫, ಮಾಲೂರು-೨, ಮುಳಬಾಗಿಲು-೩ ಹಾಗೂ ಶ್ರೀನಿವಾಸಪುರ-೧ ಸೇರಿದಂತೆ ಒಟ್ಟು ೧೭ ಪರೀಕ್ಷಾ ಕೇಂದ್ರಗಳಿವೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪದ್ಮ ಬಸವಂತಪ್ಪ ಭಾಗವಹಿಸಿದ್ದರು.

ಚಿತ್ರ ೧೧ ಕೆ.ಎಲ್.ಆರ್. ೦೬ : ಎಸ್.ಎಸ್.ಎಲ್.ಸಿ. ಪರೀಕ್ಷೆ-೨ ಬಗ್ಗೆ ವಿಡಿಯೋ ಕಾನ್ಫೆರೆನ್ಸಿಯಲ್ಲಿ ಭಾಗವಹಿಸಿರುವ ಜಿಲ್ಲಾಧಿಕಾರಿ ಅಕ್ರಂಪಾಷ ಮತ್ತು ಸಿ.ಇ.ಓ. ಪದ್ಮಬಸವಂತಪ್ಪ