ನ್ಯೂಸ್

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶಾಲಾ ಆರಂಭದಿAದಲೇ ಕ್ರಮಗಳನ್ನು ಕೈಗೊಳ್ಳಬೇಕು / ರಸ್ತೆ ಅಪಘಾತಗಳನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕು / ಜಿಲ್ಲಾಧಿಕಾರಿ ಎಂ.ಆರ್.ರವಿ

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ. ಶಾಲಾ ಕಾಲೇಜು ಆರಂಭದ ದಿನಗಳಿಂದಲೇ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಡಾ.ಎಂ. ಆರ್. ರವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚೆಗೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದ ಪ್ರಯುಕ್ತ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದ್ದು, ತಡೆಯಲು ಬೇಕಾದಂತಹ ಕ್ರಮಗಳನ್ನು ಕೈಗೊಂಡು ಅಪಘಾತ ಮತ್ತು ಮರಣವನ್ನು ತಡೆಯಬೇಕು. ಪೊಲೀಸ್ ಇಲಾಖೆಯಿಂದ ಶಿಷ್ಟಾಚಾರವಾಗಿ ಕ್ರಮಕೈಗೊಳ್ಳಬೇಕು ಹಾಗೂ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಮಾದಕ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು:

ಕೋಲಾರ ಜಿಲ್ಲೆಯನ್ನು ಮಾದಕ ವಸ್ತುಗಳ ಬಳಕೆಯ ಮುಕ್ತ ಜಿಲ್ಲೆಯನ್ನಾಗಿಸಲು ಈಗಾಗಲೇ ಅನೇಕ ಅರಿವು ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಮಿತಿಗಳನ್ನು ರಚಿಸಿ ಅರಿವು ಚಟುವಟಿಕೆಗಳನ್ನು ಮಾಡಿಸುವುದರಿಂದ ಮಾದಕ ವಸ್ತುಗಳ ಕುರಿತು ಇನ್ನಷ್ಟು ಅರಿವು ಮೂಡಿಸುವಂತೆ ಮಾಡಬೇಕೆಂದು ಪೋಲಿಸ್ ಇಲಾಖೆಗೆ ಸೂಚನೆ ನಿಡಿದರು.

ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶವನ್ನು ಹೆಚ್ಚಿಸಬೇಕು. ಡಿಡಿಪಿಐ ಹಾಗೂ ಡಿಡಿಪಿಯು ಶಾಲಾ ಕಾಲೇಜು ಆರಂಭದಿAದಲೇ ಈ ಕುರಿತು ನಿಗಾವಹಿಸಿ ಸೂಕ್ತ ಯೋಜನೆ ರೂಪಿಸಬೇಕು. ನಿರಂತರ ಪರಿಶೀಲನೆ ನಡೆಸಬೇಕು. ತಾಲೂಕುವಾರು ಪೋಷಕರು, ಎಸ್.ಡಿ.ಎಂ.ಸಿ. ಶಿಕ್ಷಕರುಗಳ ಸಭೆ ನಡೆಸಿ, ಡ್ರಾಪ್ ಔಟ್ ಆದ ಮಕ್ಕಳನ್ನು ಪುನಹ ಸೇರ್ಪಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಶೆ.೬೦ ಕ್ಕಿಂತ ಕಡಿಮೆ ಫಲಿತಾಂಶ ಬಂದ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಬೇಕು. ಕಳೆದ ಎಸ್.ಎಸ್.ಎಲ್.ಸಿ ಸುಧಾರಣೆಗೆ ಡಿಡಿಪಿಐ ಕೈಗೊಂಡಿರುವ ಕ್ರಮಗಳನ್ನು ಮುಂದುವರೆಸಿ ಮುಂದಿನ ದಿನಗಳಲ್ಲಿ ಫಲಿತಾಂಶವನ್ನು ಸವಾಲಾಗಿ ಸ್ವೀಕರಿಸಿ ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಗಮನ ನೀಡುವಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಪ್ರವಾಸೋದ್ಯಮ ಅಭಿವೃದ್ಧಿ:

ಕೋಲಾರ ಜಿಲ್ಲೆಯಲ್ಲಿ ಕುರುಡುಮಲೆ, ಅಂತರಗAಗೆ ಬೆಟ್ಟ, ಸೀತಿ ಬೆಟ್ಟ, ಮುಂತಾದ ಸ್ಥಳಗಳನ್ನು ಪ್ರವಾಸೋದ್ಯಮ ಕ್ಷೇತ್ರಗಳನ್ನಾಗಿ ಅಭಿವೃದ್ಧಿ ಮಾಡಬೇಕು ಮತ್ತು ಜಿಲ್ಲೆಯಲ್ಲಿ ಕೆರೆಗಳಲ್ಲಿ ಜಲಕ್ರೀಡೆ ಮಾಡಬಹುದು ಎಲ್ಲಾ ಇಲಾಖೆ ಅಧಿಕಾರಿಗಳ ಸಹಕಾರ ಪಡೆದು ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಬೇಕು ಎಂದರು.

ಅಧಿಕಾರಿಗಳು ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು. ನೋಡಲ್ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆಗಳ ಬಗ್ಗೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ತಿಳಿ ಹೇಳಬೇಕು. ವಿವಿಧ ಸಮೂಹ ಮಾಧ್ಯಮಗಳಲ್ಲಿ ಬರುವಂತಹ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಕಾಲ ಕಾಲಕ್ಕೆ ಕ್ರಮ ಕೈಗೊಂಡು ಸಮನ್ವಯ ಸಾಧಿಸಿ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಯುವ ಜನಾಂಗ ಬಲಿಯಾಗುತ್ತಿದೆ. ಇದನ್ನು ನಿಯಂತ್ರಿಸಬೇಕು. ತಾಲ್ಲೂಕುಗಳಲ್ಲಿ ಇಸ್ಪೀಟು, ಮಟ್ಕಾ, ಓಸಿ ದಂಧೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ಯಾವುದೇ ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷೀಣ್ಯವಾಗಿ ಹಾವಳಿಯನ್ನು ಮಟ್ಟ ಹಾಕಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿಇಓ ಡಾ. ಪ್ರವೀಣ್. ಪಿ. ಬಾಗೇವಾಡಿ, ಎಸ್.ಪಿ.ಬಿ.ನಿಖಿಲ್, ಕೆಜಿಎಫ್ ಎಸ್.ಪಿ.ಶಾಂತಕುಮಾರ್, ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಉಪಕಾರ್ಯದರ್ಶಿ ರಮೇಶ್, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರ್‌ಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೦೩ ಕೆ.ಎಲ್.ಆರ್. ೦೩ : ಜಿಲ್ಲಾಧಿಕಾರಿ ಎಂ.ಆರ್.ರವಿ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಿ.ಇ.ಓ.ಡಾ.ಪ್ರವೀಣ್ ಪಿ.ಬಾಗೇವಾಡಿ, ಎಸ್.ಪಿ.ಬಿ.ನಿಖಿಲ್, ಕೆ.ಜಿ.ಎಫ್.ಎಸ್.ಪಿ. ಶಾಂತಕುಮಾರ್ ಮುಂತಾದವರು ಇದ್ದರು.