ನ್ಯೂಸ್

ಎಸ್.ಸಿ, ಎಸ್.ಟಿ. ಅನುದಾನ ವಾಪಸ್ಸು ನೀಡಲು ಆ.೧೧ ರಂದು ಎಸ್.ಎಸಿ, ಎಸ್.ಟಿ. ನಿಗಮಗಳ ಕಛೇರಿ ಮುಂಭಾಗ ಪ್ರತಿಭಟನೆ / ಎಸ್.ಮುನಿಸ್ವಾಮಿ

ವಿಜಯವಾಣಿ ಸುದ್ದಿಜಾಲ ಕೋಲಾರ

ರಾಜ್ಯದ ಎಸ್ಸಿ, ಎಸ್‌ಟಿ, ಸಮುದಾಯದ ೧೩ ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ಮಾಡಿಕೂಂಡಿರುವುದು ಖಂಡನೀಯ. ಆ.೧೧ ರಂದು ಸೋಮವಾರ ಬೆಳಗ್ಗೆ ೧೦ ಗಂಟೆಗೆ ಎಸ್ಸಿ, ಎಸ್ಟಿ ನಿಗಮಗಳ ಕಛೇರಿಗೆ ಬಿಜೆಪಿ ಪಕ್ಷದಿಂದ ಮೂರು ಸಾವಿರ ಮಂದಿ ಕಾರ್ಯಕರ್ತರಿಂದ ಮುತ್ತಿಗೆ ಹಾಕಲಾಗುವುದೆಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಎಚ್ಚರಿಸಿದರು.

ನಗರದ ಹೊರವಲಯದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿರುವ ಭೋವಿ ಅಭಿವೃದ್ಧಿ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗಳಿಗೆ ಮುತ್ತಿಗೆ ಹಾಕುವ ಮೂಲಕ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಪ್ರತಿಭಟನೆಯನ್ನು ನಡೆಸಲಾಗುವುದು ಎಂದರು.

ರಾಜ್ಯದ ಅಹಿಂದ ನಾಯಕ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿ ನಿಗಮದ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿ, ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ಕೈಗೆ ಚಿಪ್ಪು ನೀಡಿ, ಜನಾಂಗದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳ ಹಾಗೂ ಕಾಲೋನಿಗಳ ಪ್ರಗತಿಯ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ. ಈ ಕೂಡಲೇ ರಾಜ್ಯ ಸರ್ಕಾರ ೧೩ ಸಾವಿರ ಕೋಟಿ ರೂ.ಗಳನ್ನು ವಾಪಸ್ ನೀಡಿ, ಅಭಿವೃದ್ಧಿ ನಿಗಮಗಳಿಂದ ಹಾಗೂ ಇಲಾಖೆಗಳಿಂದ ಅನುದಾನವನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದು ಮನವಿ ಮಾಡಿದರು.

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧಿಕಾರಿಗಳನ್ನು ಕೈಗೊಂಬೆಯಾಗಿ ದುರ್ಬಳಕೆ ಮಾಡಿಕೊಂಡು, ಮೈತ್ರಿ ಪಕ್ಷದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.

ವೇಮಗಲ್ ಹೋಬಳಿಯನ್ನು ವೇಮಗಲ್, ಕುರುಗಲ್ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಹೇರಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹಕಾರದಿಂದ ಸಾಧ್ಯವಾಗಿದ್ದು, ಎಂದರು.

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ಮತದಾರರ ಬಳಿ ಮತ ಕೇಳುವ ಅರ್ಹತೆ ಇಲ್ಲ ಎಂದು ಲೇವಡಿ ಮಾಡಿದರು.

ಸಚಿವರ ರಾಜೀನಾಮೆಗೆ ಒತ್ತಾಯ :

ಮೈಸೂರಿನ ಕೆ.ಆರ್.ಎಸ್. ಡ್ಯಾಮ್ ನಿರ್ಮಾತೃ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಅವರ ಶ್ರಮದಿಂದ ಸಾಧ್ಯವಾಗಿದೆ. ಆದರೆ ರಾಜ್ಯ ಸರ್ಕಾರದ ಸಚಿವ ಹೆಚ್ ಸಿ ಮಹದೇವಪ್ಪ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸಿಕೊಳ್ಳುವ ತರಾತುರಿಯಲ್ಲಿ ಟಿಪ್ಪು ಸುಲ್ತಾನ್ ಅವಧಿಯಲ್ಲಿ ಕೆಆರ್‌ಎಸ್ ನಿರ್ಮಾಣವಾಗಿದೆ ಎಂದು ಹೇಳುವ ಮೂಲಕ ನಗೆ ಪಾಟಲಿಗೆ ಈಡಾಗಿದ್ದು, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ರಾಜ್ಯದ ಜನತೆಯಲ್ಲಿ ಕ್ಷಮೆಯಾಚನೆಗೆ ಮುಂದಾಗಬೇಕೆAದು ಒತ್ತಾಯಿಸಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಕಳ್ಳತನ ಪ್ರತಿಭಟನೆಗೆ ಆಗಮಿಸುತ್ತಿದ್ದು, ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಾನಿ ಆಗುತ್ತದೆ ಎಂದರು.

ರಾಜ್ಯದ ಬಹುತೇಕ ಕೈ ಸಚಿವರು ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ರಾಜ್ಯ ಕಾನೂನು ಪ್ರಕೋಷ್ಟದ ವಸಂತ್, ಕೆಂಬೋಡಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ರಾಜೇಶ್ ಸಿಂಗ್, ವೇಮಗಲ್ ಓಹಿಲೇಶ್, ಹಾರೋಹಳ್ಳಿ ವೆಂಕಟೇಶ್, ಎಚ್ ಶ್ರೀನಿವಾಸ್, ವೇಣು ಸುಂದರ್ ಇದ್ದರು.

ಚಿತ್ರ ೦೬ ಕೆ.ಎಲ್.ಆರ್. ೦೧ : ನಗರದ ಬಿಜೆಪಿ ಕಛೇರಿಯಲ್ಲಿ ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮುಂತಾದವರು ಇದ್ದರು.