ನ್ಯೂಸ್

ಎಸ್.ಸಿ. ಎಸ್.ಟಿ. ಗುತ್ತಿಗೆದಾರರಿಗೆ ಪ್ಯಾಕೇಜ್ ಟೆಂಡರ್‌ನಿAದ ವಂಚನೆ / ಜಿಲ್ಲಾ ಗುತ್ತಿಗೆದಾರರ ಸಂಘದಿAದ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಕೋಲಾರ

ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಪ್ಯಾಕೇಜ್ ಕಾಮಗಾರಿಗಳಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದಿAದ ಬುಧವಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ಬೈಕ್ ರ‍್ಯಾಲಿ ಪ್ರಾರಂಭವಾಗಿ ಕ್ಲಾಕ್ ಟವರ್, ಹೊಸ ಬಸ್ ನಿಲ್ದಾಣ, ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರದ ಕ್ರಮವನ್ನು ಖಂಡಿಸಿ ಘೋಷಣೆ ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡುವ ಮೂಲಕ ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಾರ್ಜೆನಹಳ್ಳಿ ಬಾಬು ಮಾತನಾಡಿ, ಜಿಲ್ಲೆಯಲ್ಲಿ ೫ ರಿಂದ ೬ ಕಾಮಗಾರಿಗಳನ್ನು ಒಂದು ಪ್ಯಾಕೇಜ್ ರೀತಿಯಲ್ಲಿ ಕಾಮಗಾರಿ ಮಾಡಿ, ಅದಕ್ಕೆ ೫ ಕೋಟಿ ಅನುದಾನ ನೀಡಲು ಅಧಿಕಾರಿಗಳು ಟೆಂಡರ್ ಕರೆದಿದ್ದಾರೆ. ಇದರಿಂದಾಗಿ ಜಿಲ್ಲೆಯ ಸಾಮಾನ್ಯ ಗುತ್ತಿಗೆದಾರರು ಕಾಮಗಾರಿಗಳನ್ನು ಪಡೆಯಲು ಸಾಧ್ಯವಿಲ್ಲ. ಬೇರೆ ಬೇರೆ ಜಿಲ್ಲೆಗಳ ಪ್ರಭಾವಿಗಳಿಗೆ ಟೆಂಡರ್ ನೀಡಿ ಜಿಲ್ಲೆಯ ಗುತ್ತಿಗೆದಾರರನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

ದಲಿತ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಹಿಂದೆ ಸಿದ್ದರಾಮಯ್ಯ ಅವರು ಸುಮಾರು ಒಂದು ಕೋಟಿವರೆಗೂ ಮೀಸಲಾತಿ ಆಧಾರದಲ್ಲಿ ಗುತ್ತಿಗೆ ನೀಡಿದ್ದರು. ಇದರಿಂದಾಗಿಯೇ ಅಹಿಂದ ವರ್ಗಗಳು ಆರ್ಥಿಕಾಭಿವೃದ್ಧಿ ಸಾಧಿಸಲು ಸಾಧ್ಯವಾಗಿತ್ತು. ಇಂದು ಅಧಿಕಾರಿ ವರ್ಗ ಮತ್ತು ಕೆಲವು ಪ್ರಭಾವಿ ಜನಪ್ರತಿನಿಧಿಗಳು ಈ ಆದೇಶವನ್ನು ಪ್ಯಾಕೇಜ್ ಮಾಡಿ, ಅವಕಾಶದಿಂದ ವಂಚಿತರನ್ನಾಗಿ ಮಾಡಿದ್ದಾರೆ. ಈ ವಿಷಯವಾಗಿ ಎಸ್ಟಿ, ಎಸ್ಸಿ ಹಾಗೂ ಒಬಿಸಿ ಗುತ್ತಿಗೆದಾರರು ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಲ್ಲ ಎಂದು ಆರೋಪಿಸಿದರು.

ದಲಿತರ ಅಭಿವೃದ್ಧಿಗೆ ಅವಕಾಶಗಳಿಗಾಗಿ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ ಅಧಿಕಾರಿಗಳು ನಮಗೆ ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಮರಣ ಶಾಸನವಾಗಿದೆ. ಸರ್ಕಾರ ಕೊಟ್ಟಿರುವ ಪರವಾನಿಗೆ ವಾಪಸ್ಸು ನೀಡಿದ್ದು, ಮೀಸಲಾತಿಯ ಪ್ರತಿಯನ್ನು ಹರಿದು ಹಾಕಲಾಗಿದೆ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು. ಇಲ್ಲದೇ ಹೋದರೆ ಮುಂದೆ ಉಗ್ರವಾದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್, ಉಪಾಧ್ಯಕ್ಷ ವೆಂಕಟರೆಡ್ಡಿ, ಹಿಂದುಳಿದ ವರ್ಗದ ಜಯರಾಮ್, ತಾಲೂಕು ಅಧ್ಯಕ್ಷರಾದ ಮೋಹನ್ ಕಾಂತ್, ರಾಮಪ್ಪ, ಗಣೇಶ್, ಗೋವಿಂದರಾಜು, ಅಮರೇಶ್, ಕೃಷ್ಣಪ್ಪ, ಮುಖಂಡರಾದ ಅಂಬರೀಷ್, ಪ್ರಕಾಶ್, ನರಸಿಂಹ ಮೂರ್ತಿ ಮುಂತಾದವರು ಇದ್ದರು.

ಚಿತ್ರ ೧೦ ಕೆ.ಎಲ್.ಆರ್. ೦೩ : ಜಿಲ್ಲಾ ಎಸ್.ಸಿ. ಎಸ್.ಟಿ. ಗುತ್ತಿಗೆದಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.