ಚಾಮರಾಜನಗರ: ಕೃಷಿ ಸಚಿವ ಬಿ.ಸಿ.ಪಾಟೀಲ್ ಏ.11ಕ್ಕೆ ನಗರಕ್ಕೆ ಆಗಮಿಸುತ್ತಾರೆ.
ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಆಗಮಿಸಿ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೊನಾ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುವರು.
ಜಿಲ್ಲಾಧಿಕಾರಿಗಳು, ಪೊಲೀಸ್, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸುವರು. ನಂತರ ಮಂಡ್ಯಕ್ಕೆ ತೆರಳುವರು ಎಂದು ತಿಳಿದುಬಂದಿದೆ.