ಬಾಗಲಕೋಟೆ: ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ.೨ ಮೀಸಲಾತಿ ಹೆಚ್ಚಳ ಹಾಗೂ ಕೇಂದ್ರ ಸರ್ಕಾರಕ್ಕೆ ಒಳ ಮೀಸಲಾತಿ ಶಿಫಾರಸ್ಸು ಮಾಡಿರುವ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಲು ಏ.೬ ರಂದು ಹುಬ್ಬಳ್ಳಿಯಲ್ಲಿ ಪರಿಶಿಷ್ಟರ ಸಮಾವೇಶ, ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾದಿಗ ಮಹಾಸಭಾದ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬೃಹತ್ ಕಾರ್ಯಕರಮ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಗೋವಿಂದ ಕಾರಜೋಳ ಸೇರಿದಂತೆ ಸರ್ಕಾರದ ವಿವಿಧ ಸಚಿವರಿಗೆ ಸಮುದಾಯದ ವತಿಯಿಂದ ಸನ್ಮಾನಿಸಲಾಗುವುದು ಎಂದರು.
ಅಂದಾಜು ೨೦ ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಸಮುದಾಯದವರು ಪಾಲ್ಗೊಳ್ಳಲಿದ್ದು, ಪರಿಶಿಷ್ಟ ಜಾತಿ ಎಲ್ಲ ಸಮುದಾಯದ ಸ್ವಾಮೀಜಿಗಳು, ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಬಿಜೆಪಿ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಒಳ ಮೀಸಲಾತಿಗೆ ಕೆಲವು ಸಮುದಾಯ ದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಒಳ ಮೀಸಲಾತಿಯು ಜನಸಂಖ್ಯೆ ಆಧಾರದ ಮೇಲೆ ಸರ್ಕಾರ ವರ್ಗೀಕರಣಗೊಳಿಸಿ ಶಿಫಾರಸ್ಸು ಮಾಡಿದೆ. ಯಾವುದೇ ಪರಿಶಿಷ್ಟ ಜಾತಿಗೆ ಅನ್ಯಾಯ ಮಾಡಿಲ್ಲ. ಸುಖಾ ಸುಮ್ಮನೆ ಗೊಂದಲಕ್ಕೀಡಾಗಬಾ ರದು ಎಂದು ಮನವಿ ಮಾಡಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಯಲ್ಲಪ್ಪ ಬೆಂಡಿಗೇರಿ, ಶಿವಾನಂದ ಟವಳಿ, ಸತೀಶ ಸೂಳಿಕೇರಿ, ಚಂದ ್ರಶೇಖರ ಮುಂಡೆವಾಡಿ, ಧರ್ಮಣ್ಣ ಸನಕ್ಯಾನವರ್ ಉಪಸ್ಥಿತರಿದ್ದರು.