ಶಿಕಾರಿಪುರ: ಏಡ್ಸ್‌ನಂತಹ ಮಾರಕ ಕಾಯಿಲೆಯಿಂದ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆಪ್ತಸಮಾಲೋಚಕ ಬಿ.ಕೆ.ಚಂದ್ರಶೇಖರ್ ಹೇಳಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕುಮದ್ವತಿ ಪ್ರಥಮದರ್ಜೆ ಕಾಲೇಜು, ಐಕ್ಯೂಎಸಿ ಸಂಯೋಜಿತ ಮತ್ತು ಎನ್‌ಎಸ್‌ಎಸ್ ಹಾಗೂ ಯುವ ರೆಡ್‌ಕ್ರಾಸ್ ವಿಭಾಗದಿಂದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಿಂದ ಸೋಮವಾರ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ವಿಶ್ವ ಏಡ್ಸ್ ದಿನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ನಿರಂತರವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. 16-24 ವಷರ್ದೊಳಗಿನ ವ್ಯಕ್ತಿಗಳಲ್ಲಿ ಈ ರೋಗವು ಹೆಚ್ಚು ಕಂಡು ಬರುತ್ತಿದೆ. ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಈ ರೋಗ ಬರಲಿದೆ ಎಂದು ಹೇಳಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಪ್ತ ಸಮಾಲೋಚಕಿ ಅಖಿಲಾ ಮಾತನಾಡಿ, ಜನರಲ್ಲಿರುವ ಮೌಢ್ಯತೆ ಕೆಲವು ಸೋಂಕು ಹಾಗೂ ರೋಗಗಳಿಗೆ ಕಾರಣವಾಗುತ್ತವೆ. ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ್ಟಖಿ ಶ್ರಮಿಸಬೇಕು ಎಂದರು. ಸರ್ಕಾರಿ ಆಸ್ಪತ್ರೆಯ ಡಾ. ಅನಿಲ್‌ಕುಮಾರ್, ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಕೆ.ಸಿ.ರವೀಂದ್ರ , ವಿಭಾಗದ ಮೇಲ್ವಿಚಾರಕ ರವಿಕುಮಾರ, ಅಭಿಲಾಷ್, ಬಿ.ಇಡಿ ಹಾಗೂ ಪದವಿ ಕಾಲೇಜುಗಳ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.