ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ’ ವು ಏಪ್ರಿಲ್ 17 ರಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 50 ದಿನಗಳ ಐಎಎಸ್/ಕೆಎಎಸ್ ಪರೀಕ್ಷಾ ತರಬೇತಿ ಶಿಬಿರವನ್ನು ಹಿರಿಯ ಐಪಿಎಸ್ ಅಧಿಕಾರಿ, ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ. ಎಂ.ಬಿ. ಬೋರಲಿಂಗಯ್ಯ ಅವರು ಉದ್ಘಾಟಿಸಲಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಜಿ.ಎಸ್.ಸೋಮಶೇಖರ್ ಅವರು ಪರೀಕ್ಷಾ ಸಿದ್ಧತೆ ಕುರಿತು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಂವಾದ ನಡೆಸುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಕುಲಸಚಿವರಾದ ಪ್ರೊ. ಕೆ.ಬಿ.ಪ್ರವೀಣ ಉಪಸ್ಥಿತರಿರಲಿದ್ದಾರೆ.
ತರಬೇತಿ ಸೇರಬಯಸುವ ಆಸಕ್ತ ಅಭ್ಯರ್ಥಿಗಳು ಈಗಲೂ ಪ್ರವೇಶಾತಿ ಪಡೆಯಬಹುದಾಗಿದ್ದು, ಪ್ರವೇಶಾತಿಗಾಗಿ 0821-2515944/9964760090 ನ್ನು ಸಂಪರ್ಕಿಸಬಹುದು ಎಂದು ಸ್ಪರ್ಧಾತ್ಮಕ ತರಬೇತಿ ಕೇಂದ್ರದ ಸಂಯೋಜನಾಧಿಕಾರಿಯಾದ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ತಿಳಿಸಿದ್ದಾರೆ.