ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್.ಅರುಣ್‌ಕುಮಾರ್ ಆರೋಪಿಸಿದರು.
ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದಂತೆ ಶೀಘ್ರ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ರಾಜ್ಯಾದ್ಯಂತ ಒಳಮೀಸಲಾತಿ ಜಾರಿಗಾಗಿ ನಿರಂತರ ಹೋರಾಟ ನಡೆಯತ್ತಿದೆ. ಈ ಸಂಬಂಧ ಅ.24 ರಂದು ಸರ್ಕಾರ ಸಭೆ ನಡೆಸುವ ಮೂಲಕ ಮೂರು ತಿಂಗಳ ಒಳಗೆ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ತಿಳಿಸಿದ್ದರೂ ಜಾರಿಯಾಗಿಲ್ಲ. ಈ ಸಂಬಂಧ ಸರ್ಕಾರ ತನ್ನ ಧೋರಣೆಯನ್ನು ಕೂಡಲೇ ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಕೀಲರಾದ ಎಂ.ದಾಸಯ್ಯ, ಎಂ.ಶಿವಕುಮಾರ್, ಬೂದಿತಿಟ್ಟು ರಾಜೇಂದ್ರ, ಚಂದ್ರಸೇನ ಸಾಗರ್ ಇದ್ದರು.