ನ್ಯೂಸ್

ಕಠಿಣ ಕಾನೂನು ಕ್ರಮ ನಿಶ್ವಿತ

ಚಿತ್ರದುರ್ಗ: ಕವಾಡಿಗರಹಟ್ಟಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ತಪ್ಪು ಯಾರಿಂದಲೇ ನಡೆದಿದ್ದರೂ ಬಿಡುವುದಿಲ್ಲ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
ಕವಾಡಿಗರಹಟ್ಟಿ ಭೇಟಿಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿ, ತನಿಖಾ ವರದಿ ಕಾಯುತ್ತಿದ್ದೇವೆ. ಅದನ್ನು ಆಧರಿಸಿ ಕಾನೂನು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು.
ಜಲಸಂಗ್ರಹಾಗಾರಗಳು, ಓವರ್ ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅನುದಾನ ದುರುಪಯೋಗ ಆದ ಕುರಿತು ದೂರು ಬಂದಿವೆ. ಇಲ್ಲಿ ಹಾಹಿದೆಯೇ ಎಂದು ವರದಿ ನೀಡಲು ಪೌರಾಯುಕ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಅಧಿಕಾರಿಗಳಿಂದ ನಿರ್ಲಕ್ಷ ಆಗಿದೆ. ಸಮಸ್ಯೆ ಉಂಟಾದಾಗ ಮಾತ್ರ ಅಧಿಕಾರಿಗಳು ಬರುತ್ತಾರೆ ಎಂಬ ದೂರಿವೆ. ಹೀಗಾಗಿ ಮುಂಜಾಗ್ರತೆ ವಹಿಸದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಳಿಕ ಕಾಲನಿಗೆ ಭೇಟಿ ನೀಡಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ನಂತರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.