ನ್ಯೂಸ್

ಕಡ್ಡಾಯವಗಿ ಎಸ್ಒಪಿ ಪಾಲಿಸಿ

ಯಾದಗಿರಿ: ಕರೊನಾ ಸೋಂಕು ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರ ಹೊರಡಿಸಿರುವ ಪ್ರಮಾಣಿತ , ಕಾರ್ಯಾಚರಣೆ ವಿಧಾನ (ಎಸ್ಒಪಿ)ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಕರ್ಾರಿ ಹಾಗೂ ಖಾಸಗಿ ಶೈಕ್ಷಣಿಕ ಮಂಡಳಿಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಸೂಚಿಸಿದರು.

ಮಂಗಳವಾರ ಸಂಜೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ , ಕಾರ್ಯಾಚರಣೆ ವಿಧಾನಗಳ ಮಾರ್ಗಸೂಚಿಗಳ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸುವ ಕುರಿತಂತೆ ಯುಜಿಸಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳು ಕ್ರಮ

ವಹಿಸಬೇಕು. ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಗೃಹ ಹಗೂ ಎಲ್ಲ ಕೊಠಡಿಗಳಲ್ಲಿನ ಪಿಠೋಪಕರಣ ಮತ್ತು ಪಠ್ಯಸಾಮಗ್ರಿಗಳನ್ನು ಸ್ಯಾನಿಟೈಜರ್ ಮಾಡಿಸಬೇಕು ಎಂದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಕರ್ಾರಿ ಹಾಗೂ ಖಾಸಗಿ ಕಾಲೇಜುಗಳ ಪ್ರಾಂಶುಪಾಲರು ಇದ್ದರು.