ನ್ಯೂಸ್

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ರಾಗಿ, ಜೋಳ, ಭತ್ತ ಖರೀದಿ / ರೈತರು ಸದುಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಕರೆ

ವಿಜಯವಾಣಿ ಸುದ್ದಿಜಾಲ ಕೋಲಾರ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಭತ್ತ, ರಾಗಿ, ಜೋಳ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿಸಲು ಡಿ.೦೧ ರಿಂದ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರ ನೊಂದಣಿ ಪ್ರಕ್ರಿಯೆಯು ರಾಗಿ ಮತ್ತು ಜೋಳ ಹಾಗೂ ಭತ್ತ ಬೆಳೆಗಳಿಗೆ ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆಯು ೨೦೨೫ನೇ ಜನವರಿ ೧ರಿಂದ ೨೦೨೫ನೇ ಮಾರ್ಚ್ ೩೧ ರವರೆಗೆ ನಡೆಯಲಿದೆ.

ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ೨೩೦೦ ರೂ, ಗ್ರೇಡ್ ಎ-ಭತ್ತಕ್ಕೆ ೨೩೨೦ ರೂ, ರಾಗಿಗೆ ೪೨೯೦ ರೂ, ಹೈಬ್ರೀಡ್-ಬಿಳಿ ಜೋಳಕ್ಕೆ ೩೩೭೧ ರೂ, ಮಾಲ್ದಂಡಿ-ಬಿಳಿ ಜೋಳಕ್ಕೆ ೩೪೨೧ ರೂ ಕನಿಷ್ಠ ಬೆಂಬಲ ಬೆಲೆಗಳಾಗಿ ನಿಗಧಿಪಡಿಸಲಾಗಿದೆ ಎಂದರು.

ಬೆAಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾAಶದಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಭತ್ತ, ರಾಗಿ, ಜೋಳ ಮಾರಾಟ ಮಾಡಲು ನೊಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಎಲ್ಲಾ ಹೋಬಳಿ ಮಟ್ಟದ ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ಮುಖಾಂತರ ರೈತರ ನೊಂದಣಿಯನ್ನು ಮಾಡಲಾಗುವುದು. ಖರೀದಿ ಕೇಂದ್ರಕ್ಕೆ ರೈತರು ಕೃಷಿ ಇಲಾಖೆಯಿಂದ ಪಡೆದಿರುವ ಅವರ ಫ್ರೂಟ್ಸ್ ಐ.ಡಿ. ರೈತರ ನೊಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಮತ್ತು ಆಧಾರ್‌ನೊಂದಿಗೆ ನೊಂದಣಿ ಕೇಂದ್ರಕ್ಕೆ ಬರಬೇಕು. ಬೆಂಬಲ ಬೆಲೆಗಾಗಿ ರೈತರನ್ನು ಪ್ರತ್ಯೇಕವಾಗಿ ನೊಂದಾಯಿಸದೇ ಕೇವಲ ಅವರ ಫ್ರೂಟ್ಸ್ ಐ.ಡಿ.ಯ ಮೂಲಕ ಖರೀದಿಗೆ ನೊಂದಾಯಿಸಲಾಗುತ್ತದೆ.

ಪ್ರತಿಯೊಬ್ಬ ರೈತರ ಫ್ರೂಟ್ಸ್ ಐ.ಡಿ. ನಮೂದಿಸಿದ ನಂತರ ಫ್ರೂಟ್ಸ್ ದತ್ತಾಂಶದಿAದ ರೈತರ ಅಗತ್ಯ ಮಾಹಿತಿ ಲಭ್ಯವಾಗಲಿದೆ. ಮಾಹಿತಿಯಲ್ಲಿ ರೈತರ ಹೆಸರು, ವಿಳಾಸ, ಜಾತಿ, ವಯಸ್ಸು, ಮೊಬೈಲ್ ಸಂಖ್ಯೆ, ಜಮೀನು ಮತ್ತು ಬೆಳೆದಿರುವ ಬೆಳೆಯ ವಿವರಗಳು ಹಾಗೂ ರೈತರ ಬ್ಯಾಂಕ್ ಖಾತೆಯ ವಿವರಗಳು ಲಭ್ಯವಿರುತ್ತವೆ. ಹಾಗಾಗಿ ಪ್ರತ್ಯೇಕವಾಗಿ ಬೇರೆ ಯಾವುದೇ ದಾಖಲೆ ನೀಡುವ ಅವಶ್ಯಕತೆ ಇರುವುದಿಲ್ಲ. ಫ್ರೂಟ್ಸ್ ದತ್ತಾಂಶದನ್ವಯ ರೈತರ ಬೆಳೆ ಸಮೀಕ್ಷೆ ವಿವರದಂತೆ ಬೆಳೆ ವಿಸ್ತೀರ್ಣಕ್ಕನುಗುಣವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ತೋರಿಸಲಾಗುವುದು.

ಬೆಳೆಗಳ ಖರೀದಿ ಮಿತಿ:

ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ ೨೫ ಕ್ವಿಂಟಾಲ್‌ನAತೆ ಗರಿಷ್ಠ ೪೦ ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ಜೋಳವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ ೧೦ ಕ್ವಿಂಟಾಲ್‌ನAತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು.

ರಾಗಿಯನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ ೧೦ ಕ್ವಿಂಟಾಲ್‌ನAತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಹಣಪಾವತಿ:

ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೊಂದಾಯಿಸಿಕೊAಡಿರುವ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಹಣ ಪಾವತಿಸಲಾಗುವುದು.

ಮಧ್ಯವರ್ತಿಗಳು, ಏಜೆಂಟರ್‌ಗಳು ಖರೀದಿ ಕೇಂದ್ರಗಳಿಗೆ ಭತ್ತವನ್ನು ತಂದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದ್ದಾರೆ.

ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ತಾಲ್ಲೂಕಿನ ತಹಶೀಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಟಾಸ್‌ಕ್‌ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ಕೃಷಿ ಜಂಟಿ ನಿರ್ದೇಶಕರು ಸುಮಾ ಸೇರಿದಂತೆ ಪ್ರಮುಖ ಇಲಾಖೆಗಳ ಮುಖ್ಯಸ್ಥರುಗಳು ಹಾಜರಿದ್ದರು.

ಚಿತ್ರ ೧೨ ಕೆ.ಎಲ್.ಆರ್. ೦೫ : ಜಿಲ್ಲಾಧಿಕಾರಿ ಅಕ್ರಂಪಾಷ ರವರ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ರಾಗಿ, ಜೋಳ ಮತ್ತು ಭತ್ತ ಖರೀದಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ. ಎಡಿಸಿ ಮಂಗಳ, ಕೃಷಿ ಜಂಟಿ ನಿರ್ದೇಶಕಿ ಸುಮಾ ಮುಂತಾದವರಿದ್ದರು.