ಕಡೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚಾರ ನಡೆಸತ್ತಿರುವ ಭುವನೇಶ್ವರಿ ಕನ್ನಡ ರಥಯಾತ್ರೆ ಶನಿವಾರ ಪಟ್ಟಣಕ್ಕೆ ಆಗಮಿಸಿದಾಗ ಅದ್ದೂರಿ ಸ್ವಾಗತ ಕೋರಲಾಯಿತು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ರಥಯಾತ್ರೆಯನ್ನು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಕಸಾಪ ಹಾಗೂ ಕಂದಾಯ ವಿಭಾಗದ ಅಧಿಕಾರಿಗಳು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ರಥಯಾತ್ರೆಗೆ ಸ್ವಾಗತ ಕೋರಿದರು. ಡೊಳ್ಳಿನ ಕಲಾತಂಡಗಳೊಂದಿಗೆ ಪಟ್ಟಣದ ಬಿ.ಎಚ್.ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.
ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಕನ್ನಡ ನಮ್ಮೆಲ್ಲರ ಬದುಕಿಗೆ ಸ್ಫೂರ್ತಿಯ ಸೆಲೆ. ಮಂಡ್ಯದಲ್ಲಿ ಡಿಸೆಂಬರ್‌ನಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಯಾತ್ರೆ ಎಲ್ಲೆಡೆ ಕನ್ನಡದ ಕಂಪು ಪಸರಿಸಲಿದೆ. ಕನ್ನಡದ ಮನಸ್ಸುಗಳನ್ನು ಗಟ್ಟಿಗೊಳಿಸುವ ಪ್ರಯತ್ನಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದರು.
ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ತಾಲೂಕು ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸವಿತಾ ಸತ್ಯನಾರಾಯಣ, ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಸ್ವಾಮಿ, ಕಂದಾಯ ನಿರೀಕ್ಷಕರಾದ ರವಿ, ಗಿರೀಶ್, ರವಿ, ಪುರಸಭೆ ಸದಸ್ಯರ ಯಾಸೀನ್, ಮೇಲ್ವಿಚಾರಕ ರಾಜು, ಮುಖಂಡರಾದ ಬೆಂಕಿ ಶೇಖರಪ್ಪ, ಚಿನ್ನರಾಜು, ಆರೋಗ್ಯ ನಿರೀಕ್ಷಕ ಶ್ರೀನಿವಾಸ್‌ಮೂರ್ತಿ, ಕಸಾಪ ತಾಲೂಕು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಪುರಸಭೆ ಸಿಬ್ಬಂದಿ ಇದ್ದರು.