ನ್ಯೂಸ್

ಕರ್ನಾಟಕ ಲೋಕಾಯುಕ್ತ: ದೂರು ಸ್ವೀಕರಿಸುವ ಕಾರ್ಯಕ್ರಮ

ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಜುಲೈ 16 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರು ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಾರ್ವಜನಿಕ/ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಅಗತ್ಯ ದಾಖಲೆಗಳೊಡನೆ ಸಾರ್ವಜನಿಕರು ದೂರು ನೀಡಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಉಮೇಶ್.ಟಿ. ಜೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.