ನ್ಯೂಸ್

ಕಲಾ ತರಬೇತಿ ಶಿಬಿರ: ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2025/26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಲಾ ತರಬೇತಿ ಶಿಬಿರವನ್ನು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಆಯೋಜಿಸಲಾಗುತ್ತಿದೆ. ತರಬೇತಿಯು ಆರು ತಿಂಗಳ ಅವಧಿಯದಾಗಿದ್ದು, ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಜಾನಪದ/ ನೃತ್ಯ/ಸುಗಮ ಸಂಗೀತ/ ಶಾಸ್ತ್ರೀಯ ಸಂಗೀತ/ಹಿoದೂಸ್ಥಾನಿ ಸಂಗೀತ/ವಾದ್ಯ ಸಂಗೀತ ತರಬೇತಿಯನ್ನು ನೀಡಲು ಹಿರಿಯ/ಪರಿಣಿತ ಗುರುಗಳು/ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸ್ವ ವಿವರದೊಂದಿಗೆ ಜುಲೈ 15 ರ ಸಂಜೆ 5.30 ರೊಳಗೆ ಕರ್ನಾಟಕ ಕಲಾಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ದೂ.ಸಂ:0821-2513225 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ.ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.