ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸಿದ ಶ್ರೀ ಲಕ್ಷ್ಮೀಕಾಂತ ಸ್ವಾಮಿ.  
ನ್ಯೂಸ್

ಕಳಲೆ ಶ್ರೀ ಲಕ್ಷ್ಮೀಕಾಂತಸ್ವಾಮಿಗೆ ಬೆಣ್ಣೆ ಅಲಂಕಾರ ಪೂಜೆ

ನಂಜನಗೂಡು: ಶ್ರಾವಣ ಮಾಸದ ಕಡೇ ಶನಿವಾರ ಪ್ರಯುಕ್ತ ಪುರಾಣ ಪ್ರಸಿದ್ಧ ತಾಲೂಕಿನ ಕಳಲೆ ಶ್ರೀ ಲಕ್ಷ್ಮೀಕಾಂತಸ್ವಾಮಿ ದೇವಾಲಯದಲ್ಲಿ ಬೆಣ್ಣೆಅಲಂಕಾರ ವಿಶೇಷ ಪೂಜೆ ಸಲ್ಲಿಸಲಾಯಿತು.


ಕಳಲೆ ಶ್ರೀ ಲಕ್ಷ್ಮೀಕಾಂತ ಸ್ವಾಮಿಗೆ ಬೆಣ್ಣೆಯಿಂದ ಅಲಂಕಾರ ಮಾಡಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಂಗಳೂರು ಸೇರಿದಂತೆ ವಿವಿಧ ಕಡೆಯಿಂದ ಹಲವಾರು ಭಕ್ತರು ಹಾಗೂ ಸೇವಾರ್ಥದಾರರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಶ್ರೀ ಅರವಿಂದ ನಾಯಕಿ ಹಾಗೂ ಶ್ರೀ ಆಂಡಾಳಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು.


ದೇವಾಲಯಕ್ಕೆ ಅಗತ್ಯ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಬೆಂಗಳೂರಿನ ಉದ್ಯಮಿ ಮಹೇಶ್ ಹಾಗೂ ಸೇವಾರ್ಥದಾರರಾದ ಬೆಂಗಳೂರಿನ ಪುಷ್ಪಾ ಅವರಿಗೆ ಫಲ ತಾಂಬೂಲ ನೀಡಿ ಗೌರವಿಸಲಾಯಿತು. ದೇವಾಲಯದ ಪಾರುಪತ್ತೇದಾರ ಜಯರಾಮ್ ಇತರರು ಇದ್ದರು.