ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತರಿಂದ ನಾಳೆ ಚಾ.ನಗರದಲ್ಲಿ ಪ್ರತಿಭಟನೆ

ಚಾಮರಾಜನಗರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಉದ್ದೇಶಪೂರ್ವಕವಾಗಿ ಇಡಿ ತನಿಖೆಯ ಒಳಪಡಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ದ ಜು.22 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತಿಳಿಸಿದರು.


ನಗರದ ಸತ್ತಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದಾವಣಗೆರೆಯಲ್ಲಿ ಆ.3 ರಂದು ನಡೆಯುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯರವರ 75 ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.


ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಶಾಸಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಮಾಜಿ ಶಾಸಕ ಎಸ್.ಜಯಣ್ಣ, ಮುಖಂಡ ಗಣೇಶ್‌ಪ್ರಸಾದ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಉಪಾಧ್ಯಕ್ಷ ಕೊಪ್ಪಾಳಿನಾಯಕ ಮತ್ತು ಇತರರು ಇದ್ದರು.