ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿರುವ ಪ್ರವಾಸಿಗರು ತಾವು ಸುರಕ್ಷಿತವಾಗಿರುವ ಕುರಿತು ಜಾಲತಾಣದಲ್ಲಿ ಹಂಚಿಕೊಂಡ ಫೋಟೋ. 
ನ್ಯೂಸ್

ಕಾಫಿ ನಾಡಿನ ಪ್ರವಾಸಿಗರು ಸೇಫ್

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ತಾಲೂಕುಗಳಿಂದ ಅಮರನಾಥ ಯಾತ್ರೆಗೆ ತೆರಳಿರುವ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ತಾವು ಸುರಕ್ಷಿತವಾಗಿರುವ ಬಗ್ಗೆ ಪ್ರವಾಸಿಗರೇ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡು ಸ್ನೇಹಿತರು, ಪಾಲಕರು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ಕಳೆದ ವಾರ ಐವರು ತೆರಳಿದ್ದರು. ಶೇಷನಾಗ್ ಪ್ರದೇಶದ ಹೋಟೆಲ್‌ನಲ್ಲಿ ಶ್ರೀನಿವಾಸ್, ಮಣಿ, ಭರತ್, ಚಂದ್ರಶೇಖರ್, ಮನೋಜ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.