ನ್ಯೂಸ್

ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ

ಚನ್ನಪಟ್ಟಣ: ಗ್ರಾಮೀಣ ಪ್ರದೇಶಗಳ ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಡಿ.ಕೆ.ಸುರೇಶ್ ಎಚ್ಚರಿಕೆ ನೀಡಿದರು.

ತಾಲೂಕಿನ ಸೋಗಾಲಪಾಳ್ಯದಲ್ಲಿ ಬಳಿ ಪಿಎಂಜಿಎಸ್‌ವೈ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ವಾತನಾಡಿದರು.

ಅಭಿವೃದ್ಧಿ ಉದ್ದೇಶದಿಂದ ಬಿಡುಗಡೆಯಾದ ಹಣ ಯಾವುದೇ ಕಾರಣಕ್ಕೂ ಪೋಲಾಗಬಾರದು. ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು. ಸರ್ಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಹಕ್ಕು ಇರುತ್ತದೆ. ಕಾಮಗಾರಿಯ ಬಗ್ಗೆ ಸಾರ್ವಜನಿಕರು ಹದ್ದಿನಕಣ್ಣು ಇಡಬೇಕು ಎಂದರು.

ಪ್ರಧಾನಮಂತ್ರಿ ಗ್ರಾಮ್‌ಸಡಕ್ ಯೋಜನೆಯಡಿ 80 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಕಾಮಗಾರಿಯ ಸ್ಥಳದಲ್ಲಿ ಖುದ್ದು ಹಾಜರಿದ್ದು, ಕಾಮಗಾರಿ ವೀಕ್ಷಿಸಿ ಗುತ್ತಿಗೆದಾರರಿಗೆ ಬಿಲ್ ನೀಡಬೇಕು ಎಂದು ಸೂಚಿಸಿದರು.

ತಹಸೀಲ್ದಾರ್ ನಾಗೇಶ್, ತಾಪಂ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ರಾಜ್ಯ ಕುಕ್ಕುಟ ಮಹಾಮಂಡಲದ ಅಧ್ಯಕ್ಷ ಡಿ.ಕೆ. ಕಾಂತರಾಜು, ಹಾಪ್‌ಕಾಮ್ಸ್ ನಿರ್ದೇಶಕ ಶಿವವಾದು, ಹಾಪ್‌ಕಾಮ್ಸ್ ವಾಜಿ ನಿರ್ದೇಶಕ ಬೋರ್‌ವೆಲ್ ರಂಗನಾಥ್, ಗ್ರಾವಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ಪ್ರಮೋದ್, ನಗರ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಸುನಿಲ್‌ಕುವಾರ್ ಇತರರು ಇದ್ದರು.

ಬೆಸ್ಕಾಂ ಅಧಿಕಾರಿಗಳ ಜತೆ ಚರ್ಚೆ: ಕೆಲ ರೈತರು ಅಸಮರ್ಪಕ ವಿದ್ಯುತ್ ಪೂರೈಕೆ ಬಗ್ಗೆ ಸಂಸದರ ಗಮನಕ್ಕೆ ತಂದರು. ಡಿಕೆಶಿ ಇಂಧನ ಸಚಿವರಾಗಿದ್ದಾಗ ರೈತರ ಕೊಳವೆಬಾವಿಗಳಿಗೆ ಅಳವಡಿಸಿರುವ ಟಿಸಿ ಸುಟ್ಟುಹೋದರೆ ವಾರದೊಳಗೆ, ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸಿ, 24 ಗಂಟೆಯೊಳಗೆ ಸರಿಪಡಿಸಬೇಕು ಎಂದು ಆದೇಶ ವಾಡಿದ್ದರು. ಇಂದು ಕೇಳುವವರು ಯಾರೂ ಇಲ್ಲ. ಬೆಸ್ಕಾಂ ಇಲಾಖೆಯಿಂದ ರೈತರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ನನಗೂ ವಾಹಿತಿ ಇದೆ. ಸದ್ಯದಲ್ಲೇ ಬೆಸ್ಕಾಂ ಅಧಿಕಾರಿಗಳ ಜತೆ ಚರ್ಚೆವಾಡುತ್ತೇನೆ ಎಂದು ಸುರೇಶ್ ತಿಳಿಸಿದರು.