ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗಾಯಗೊಂಡಿದ್ದಾರೆ.
ಕಾರಿನಲ್ಲಿ ನಗರದ ಕಡೆಗೆ ಬರುತ್ತಿದ್ದಾಗ ಬಿಕರ್ನಕಟ್ಟೆ ಬಳಿ ಮೀನು ಸಾಗಾಟದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದೆ. ಪರಿಣಾಮ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.