ಚಿತ್ರದುರ್ಗ: ಬದುಕಿಗೆ ಕಣ್ಣುಗಳು ಬಹಳ ಅವಶ್ಯಕವಾಗಿದ್ದು,ಕಾಲ,ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳ ಬೇಕೆಂದು ಎಡಿಸಿ ಬಿ.ಟಿ.ಕುಮಾರ ಸ್ವಾಮಿ ಹೇಳಿದರು. ಆರೋಗ್ಯ ಇಲಾಖೆ,ಜಿಲ್ಲಾಸ್ಪತ್ರೆ,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ನಗರಸಭೆ ಹಾಗೂ ಶಿವಮೊಗ್ಗ ಶಂಕರ ಕಣ್ಣಿನ ಆ ಸ್ಪತ್ರೆ ಸಹಯೋಗದಲ್ಲಿ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೃಹತ್ ಕಣ್ಣಿನ ಉಚಿತ ತಪಾಸಣೆ,ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಕಣ್ಣುಗಳು ನಮ್ಮ ಆತ್ಮದ ಕಿಟಕಿಗಳಿದ್ದಂತೆ, ಕಣ್ಣಿನ ಬಗ್ಗೆ ಕಾಳಜಿ,ರಕ್ಷಣೆ ವಹಿಸುವುದು ಅತ್ಯಂತ ಅವಶ್ಯಕವಾಗಿದ್ದು,ಇಂಥ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣುಗಳ ಆರೋಗ್ಯ ಕಾಪಾ ಕೊಳ್ಳಿ ಎಂದರು.
ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು. ನೇತ್ರದಾನದ ಮೂಲಕ ಅಂಧರ ಬಾ ಳಿಗೆ ಬೆಳಕಾಗೋಣ ಎಂದರು. ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾರಾಘವೇಂದ್ರ ಮಾತನಾಡಿ,ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಶಿಬಿರಗಳಿಗೆ ನಗರಸಭೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಹಿರಿಯ ನಟ ದೊಡ್ಡಣ್ಣ ಮಾತನಾಡಿ,ಕೆ.ಸಿ.ವೀರೇಂದ್ರ ಪಪ್ಪಿ ಶಾಸಕರಾಗಿ ಆಯ್ಕೆಯಾದ ಮರು ದಿನದಿಂದಲೇ ಕ್ಷೇತ್ರ ಜನರ ಸೇವೆಯ ಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 22 ಗ್ರಾಪಂಗಳ ವ್ಯಾಪ್ತಿಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರಗಳನ್ನು ನಡೆಸಿಕೊಂಡು ಬರಲಾಗಿದೆ. ಈವರೆಗೂ 20 ಗ್ರಾಪಂಗಳಲ್ಲಿ ಶಿಬಿರವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿ ದೆ. ಕ್ಷೇತ್ರದಲ್ಲಿ 6,451 ಜನರು ಪರೀಕ್ಷೆಗೆ ಒಳಗಾಗಿ, ಈ ಪೈಕಿ 667 ಜನರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ. 2,460 ಜನರಿಗೆ ಕನ್ನಡಕಗ ಳನ್ನು ವಿತರಿಸಲಾಗಿದೆ. ಚಿತ್ರದುರ್ಗ ನಗರದ ಎಲ್ಲ ವಾರ್ಡ್‌ಗಳಲ್ಲಿ ಪ್ರತಿ ತಿಂಗಳು ಪ್ರತ್ಯೇಕವಾಗಿ ಈ ಶಿಬಿರ ಆಯೋಜಿಸಲಾಗುವುದು ಎಂ ದರು.
ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಒ.ನಾಗರಾಜ್ ಮಾತನಾಡಿ,ಶಿಬಿರಕ್ಕೆ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗದಿಂದ ಅಗತ್ಯ ಸ ಹಕಾರ ನೀಡಲಾಗುವುದು ಎಂದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ,ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ,ಪೌರಾಯುಕ್ತೆ ಎಂ.ರೇಣುಕಾ,ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ,ಟಿಎ ಚ್‌ಒ ಡಾ.ಬಿ.ವಿ.ಗಿರೀಶ್,ಡಿವೈಎಸ್‌ಪಿ ಪಿ.ಕೆ.ದಿನಕರ್,ಶಂಕರ ಕಣ್ಣಿನ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರವಿಶಂಕರ್,ತಾಲೂಕು ಆ ರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್,ಮುಖಂಡರಾದ ಮುಹಿಬುಲ್ಲಾ,ನರಸಿಂಹಮೂರ್ತಿ ಇತರರು ಇದ್ದರು.