ನ್ಯೂಸ್

ಕುಟುಂಬ ಸಮೇತ ರಾಯರ ದರ್ಶನ ಪಡೆದ ಬಿಎಸ್‌ವೈ

ರಾಯಚೂರು
ಕುಟುಂಬ ಸಮೇತ ಮಂತ್ರಾಲಯದ ಶ್ರೀ ರಾಘವೇಂದ್ರಸ್ಚಾಮಿಗಳ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ.
ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಹಾಗೂ ಸೊಸೆಯಂದಿರೊಂದಿಗೆ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಕೆ.
ನಂತರ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಬಿಎಸ್‌ಐ ಮತ್ತು ಕುಟುಂಬಸ್ಥರನ್ನು ಸನ್ಮಾನಿಸಿ, ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಗಳು ಬಿಎಸ್‌ವೈ ಅಧಿಕಾರಾವಧಿಯಲ್ಲಿ ಮಂತ್ರಾಲಯದ ಅಭಿವೃದ್ಧಿಗೆ ನೀಡಿದ ಸಹಕಾರವನ್ನು ಸ್ಮರಿಸಿದರು.